ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ 3ರ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ. ಇಂದಿನ ಪ್ರಕಟಿತ ದ್ವಿತೀಯ ಪಿಯುಸಿ ಪರೀಕ್ಷೆ-3ರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.
ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಿಸಲಾಗಿದೆ ಅಂತ ಹೇಳಿದ್ದಾರೆ.
ಅಂದಹಾಗೇ ದ್ವಿತೀಯ ಪಿಯುಸಿ ಪರೀಕ್ಷೆ 3ಕ್ಕೆ 76,005 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 17,911 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾವಾರು ಪ್ರಮಾಣ ನೋಡುವುದಾದರೇ ಶೇ. 21.65% ಬಾಲಕರು ಹಾಗೂ ಶೇ.26.55% ಬಾಲಕಿಯರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರಲ್ಲಿ ಪಾಸ್ ಆಗಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಹೀಗೆ ಚೆಕ್ ಮಾಡಿ
ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ತಾವು ಕುಳಿತಲ್ಲೇ ಅಂತರರ್ಜಾಲದ ಮೂಲಕ ವೀಕ್ಷಿಸಬಹುದಾಗಿದೆ.
ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ದಾಖಲಿಸಿ ಪರಿಶೀಲಿಸಬಹುದಾಗಿದೆ.
BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!