ಬೆಂಗಳೂರು: ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ ಪ್ರಕಟಿಸಲಾಗುತ್ತಿದೆ ಅಂತ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಹೀಗೆ ಚೆಕ್ ಮಾಡಿ
ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ತಾವು ಕುಳಿತಲ್ಲೇ ಅಂತರರ್ಜಾಲದ ಮೂಲಕ ವೀಕ್ಷಿಸಬಹುದಾಗಿದೆ.
ವಿದ್ಯಾರ್ಥಿಗಳು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ದಾಖಲಿಸಿ ಪರಿಶೀಲಿಸಬಹುದಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಭಾರಿ ಮಳೆ ಹಿನ್ನಲೆ: ನಾಳೆ ‘ಹಾಸನ ಜಿಲ್ಲೆ’ಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ | School Holiday
Good News: ಶೀಘ್ರವೇ ‘10,000 ಶಿಕ್ಷಕ’ರ ನೇಮಕಾತಿಗೆ ಅಧಿಸೂಚನೆ ಪ್ರಕಟ: ಸಚಿವ ಮಧು ಬಂಗಾರಪ್ಪ | Teacher Recuitment