ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಶಾಲಾ ಪರೀಕ್ಷೆಗಳ ಇಲಾಖೆ ನಡೆಸಿತ್ತು. ಈ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಪರೀಕ್ಷೆಗಳ ಇಲಾಖೆಯು ತಿಳಿಸಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು ಎಂದು ಹೇಳಿದೆ.
ಈ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ಮಾಹಿತಿ ನೀಡಿದೆ.
ಇನ್ನೂ ವಿದ್ಯಾರ್ಥಿಗಳು ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡ ನಂತ್ರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧಿಕೃತ ಜಾಲತಾಣ https://karresults.nic.in ಗೆ ಭೇಟಿ ನೀಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ನೀಡುವ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ
ಶಾಲಾ ಶಿಕ್ಷಣ ಇಲಾಖೆಯಿಂದ ‘ಬೇಸಿಗೆ ರಜಾ ಅವಧಿಯಲ್ಲಿ ತರಗತಿ’ ನಡೆಸೋ ಬಗ್ಗೆ ಮಹತ್ವದ ಆದೇಶ
ರಾಜ್ಯ ಸರ್ಕಾರದ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ ಖರ್ಚಾದ ‘ಹಣ’ ಎಷ್ಟು ಗೊತ್ತಾ.? ಇಲ್ಲಿದೆ ಮಾಹಿತಿ