ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್

ವಿಧಾನಪರಿಷತ್ತು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಸೋಮವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಸಿ.ಎನ್.ಮಂಜೇಗೌಡ ಅವರು ನಿಯಮ 330 ರಡಿ ಅಕ್ರಮ ಬಡಾವಣೆಗಳ ವಿಚಾರವನ್ನು ಪ್ರಸ್ತಾಪಿಸಿದರು. ಇದಕ್ಕೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಬಡಾವಣೆ ನಿರ್ಮಾಣ ಮಾಡುವವರು ವಿನ್ಯಾಸ ಅನುಮೋದನೆಯನ್ನು … Continue reading ರಾಜ್ಯದಲ್ಲಿನ ಅಕ್ರಮ ಬಡಾವಣೆ ನಿರ್ದಾಕ್ಷಿಣ್ಯವಾಗಿ ತೆರವು: ಸಚಿವ ಬಿಎಸ್ ಸುರೇಶ್