ಚಿತ್ರದುರ್ಗ : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಹಗರಣ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಉದ್ಯಮಿ ಕೆ.ಸಿ.ವೀರೇಂದ್ರ ಅಲಿಯಾಸ್ ಪಪ್ಪಿ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ ಇದರ ಬೆನ್ನಲ್ಲೇ ಇಂದು ಇಡೀ ಅಧಿಕಾರಿಗಳು ಮತ್ತೆ ಚಳ್ಳಕೆರೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಹೌದು ಇಡಿ ಇಂದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ಅಧಿಕಾರಿಗಳು ಚಳ್ಳಕೆರೆಯಲ್ಲಿ ಮತ್ತೆ ದಾಳಿ ಮಾಡಿದ್ದಾರೆ. ಚಳ್ಳಕೆರೆಯ ಫೆಡರಲ್ ಬ್ಯಾಂಕ್ ನಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವಿವಿಧಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ಪ್ರಕರಣ ಹಿನ್ನೆಲೆ?
ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ನಡೆಸಿ ಬಹುಕೋಟಿ ಹಣ ಗಳಿಸಿರುವ ಬಗ್ಗೆ ಶಾಸಕ ವೀರೇಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರಕರಣ ಸಂಬಂಧ ಆ.23 ರಂದು ವೀರೇಂದ್ರ ಅವರನ್ನು ಇ.ಡಿ ಬಂಧಿಸಿತ್ತು. ಇದಕ್ಕೂ ಮುನ್ನ ವೀರೇಂದ್ರ ಅವರ ಮನೆ, ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳನ್ನು ಇ.ಡಿ ಶೋಧಿಸಿತ್ತು.
ಈ ವೇಳೆ ಐಷಾರಾಮಿ ಕಾರುಗಳು, ಕೆ.ಜಿ. ಗಟ್ಟಲೆ ಚಿನ್ನ ಹಾಗೂ ಕೋಟ್ಯಂತರ ರು. ನಗದು ಜಪ್ತಿಯಾಗಿತ್ತು. ಬೆಟ್ಟಿಂಗ್ ಆ್ಯಪ್‌ಗಳಿಂದ ಕಡಿಮೆ ಅವಧಿಯಲ್ಲಿ ಸುಮಾರು 2000 ಕೋಟಿ ರು. ಗಳಿಸಿದ್ದಾರೆ ಎಂದು ತನಿಖೆ ವೇಳೆ ಪತ್ತೆಯಾಗಿರುವುದಾಗಿ ಇ.ಡಿ ಹೇಳಿದೆ. ಈ ಹಿನ್ನೆಲೆಯಲ್ಲಿ ಆನ್‌ಲೈನ್ ಮೋಸದ ಜಾಲ ಮತ್ತಷ್ಟು ಶೋಧಿಸಲು ವೀರೇಂದ್ರ ಅವರಿಗೆ ಇ.ಡಿ. ಗ್ರಿಲ್ ನಡೆಸಲಿದೆ ಎನ್ನಲಾಗಿದೆ.