ಬೆಂಗಳೂರು: ಅಕ್ರಮ ಆನ್ ಲೈನ್ ಹಾಗೂ ಆಪ್ ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು ಇಡಿ ಬಂಧಿಸಿತ್ತು. ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ಆಗಸ್ಟ್.28ರವರೆಗೆ ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಅಕ್ರಮ ಆನ್ ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಮನೆ, ಕಚೇರಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದರು. ಅಕ್ರಮ ಹಣ ವರ್ಗಾವಣೆ ಪತ್ತೆಯಾದ ಹಿನ್ನಲೆಯಲ್ಲಿ ಸಿಕ್ಕಿಂನಲ್ಲಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಲಾಗಿತ್ತು.
ಇಂದು ಇಡಿ ಅಧಿಕಾರಿಗಳಿಂದ 35ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಸೈಯದ್ ಬಿ ರೆಹಮಾನ್ ಅವರು ಆಗಸ್ಟ್.28ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.