ಯಾದಗಿರಿ : ಕಲ್ಯಾಣಕರ್ನಾಟಕ ಭಾಗದಲ್ಲಿ ಪ್ರಮುಖವಾಗಿ ಕಲಬುರಗಿ, ರಾಯಚೂರು, ಬಳ್ಳಾರಿ ಮುಂತಾದ ಕಡೆ ಅಕ್ರಮ ಮರಳು ಸಾಗಾಟ ದಂಧೆ ನಡೆಯುತ್ತಿದೆ.ಮಳೆ ಬಾರದೆ ಇರುವುದರಿಂದ ನದಿಗಳಲ್ಲಿನ ನೀರು ಬತ್ತಿ ಹೋಗಿವೆ.ಹಾಗಾಗಿ ಮರಳು ದಂಧೆ ಬಹಳ ಜೋರಾಗಿ ನಡೆಯುತ್ತಿದೆ.
ನದಿಯಲ್ಲಿ ನೀರು ಬತ್ತಿದ ನಂತರ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಕ್ಕರಾಯಕುಂಪಿಯಲ್ಲಿ ಇದಿಗ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸುಮಾರು 1.58 ಕೋಟಿ ರೂ. ಮೌಲ್ಯದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ.
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 20,033 ಮೆಟ್ರಿಕ್ ಟನ್ ನಷ್ಟು ಮರಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜಮೀನು ಮಾಲೀಕರಾದ ಚಂದ್ರಮ್ಮ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ. ಗಣಿ ಮತ್ತು ಭೂ ವಿಜ್ಞಾನಿ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದರಿಂದ ಇದೀಗ ಅಧಿಕಾರಿಗಳು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.