ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿ ಖಾಸಗೀ ಮಾಹಿತಿ ಸಂಗ್ರಹಿಸಿದ ಆರೋಪದಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಇದು ಕಚೇರಿಯ ಮೇಲೆ ಪೊಲೀಸರು ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ ತೊಡಗಿದ್ದಾರೆ.
BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ
ಬಿಬಿಎಂಪಿಯ ಜಂಟಿ ಆಯುಕ್ತ ರಂಗಪ್ಪ ಅವರು ಚಿಲುಮೆ ಸಂಸ್ಥೆಯ ವಿರುದ್ಧ ಮತದಾರರ ಪಟ್ಟಿ ಪರಿಷ್ಕರಣೆ ವೇಳೆಯಲ್ಲಿನ ಅಕ್ರಮ ಸಂಬಂಧ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ, ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ: ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ, 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ
ಈ ಬೆನ್ನಲ್ಲೇ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಚಿಲುಮೆ ಸಂಸ್ಥೆಯ ಮೇಲೆ ಹಲಸೂರು ಗೇಟ್ ಠಾಣೆಯ ಇನ್ಸ್ ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಕಚೇರಿಯಲ್ಲಿ ಅಕ್ರಮವಾಗಿ ಮತದಾರರ ಖಾಸಗಿ ಮಾಹಿತಿ ಸಂಗ್ರಹ ಸಂಬಂಧ ಪರಿಶೀಲನೆ ನಡೆಸಲಾಗುತ್ತಿದೆ.
ವಿದ್ಯುತ್ ಬಿಲ್ ಕಟ್ಟದ ಸರ್ಕಾರಿ ಕಚೇರಿಗಳಿಗೆ BESCOM ಬಿಗ್ ಶಾಕ್: ಬಿಬಿಎಂಪಿ, BWSSBಗೆ ಬಾಕಿ ಪಾವತಿಗೆ ನೋಟಿಸ್