ನವದೆಹಲಿ: ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಮತದಾನ ನಡೆದಿರುವುದಾಗಿ ದಾಖಲೆ ಸಹಿತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಮತದಾನ ನಡೆದಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರದಲ್ಲಿ ಅಕ್ರಮ ಮತದಾನ ನಡೆದಿದೆ ಎಂಬುದಾಗಿ ಆರೋಪಿಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬ ವ್ಯಕ್ತಿಯ ಹೆಸರು ನಾಲ್ಕು ಬೂತ್ ಗಳಲ್ಲಿ ಸೇರ್ಪಡೆ ಮಾಡಲಾಗಿದೆ. ಗುರುಕಿರತ್ ಸಿಂಗ್ ಡ್ಯಾಂಗ್ ಎಂಬಾತನ ಹೆಸರು ನಾಲ್ಕು ಬೂತ್ ಗಳಲ್ಲಿದೆ. ಇಂತಹ ಸಾವಿರಾರು ಉದಾಹರಣೆಗಳು ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎಂದರು.
ಆದಿತ್ಯ ಶ್ರೀವಾಸ್ತವ್ ಎಂಬಾತನ ಹೆಸರು ಬೇರೆ ರಾಜ್ಯಗಳ ಮತಪಟ್ಟಿಯಲ್ಲಿದೆ. ಈತನ ಹೆಸರು ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲೂ ಇದೆ. ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲೂ ಮತದಾನದ ಹಕ್ಕು ಹೊಂದಿದ್ದಾನೆ. ಲಕ್ಷಾಂತರ ಜನ ಬೇರೆ ರಾಜ್ಯಗಳ ನಕಲಿ ವೋಟರ್ ಐಡಿ ಹೊಂದಿದ್ದಾರೆ ಎಂಬುದಾಗಿ ದೆಹಲಿಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದರು.
#WATCH | Delhi: Lok Sabha LoP and Congress MP Rahul Gandhi says, "… Coming to fake addresses… They are mostly of 3 types: either an address that doesn't exist. You go look for it, it's not there, or the address is 0, house number 0, street number 0 or then the address cannot… pic.twitter.com/heg69tyzFn
— ANI (@ANI) August 7, 2025
BIG NEWS: ಮೋದಿ ಕಳ್ಳ ಮತದಾನದಿಂದಲೇ ಗೆದ್ದಿರೋದು: ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು
BREAKING: ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’ ಕೇಸ್: ‘ಕಚೇರಿ ಅಧೀಕ್ಷಕ ಸುನೀಲ್’ ಸೇವೆಯಿಂದ ಅಮಾನತು