ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಬಹುದೊಡ್ಡ ಹಗರಣ ನಡೆದಿದೆ. ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಥ್ ನಾರಾಯಣ ವಿರುದ್ಧ ಕೆಪಿಸಿಸಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

BIGG NEWS : ಮೇಲುಕೋಟೆ ಬೆಟ್ಟದಲ್ಲಿ ತಪ್ಪಿದ ದುರಂತ : ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳ ಮೇಲೆ ಬಿದ್ದ ಬೃಹತ್ ಮರ : ಗಂಭೀರ ಗಾಯ

 

ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುವ ತಂತ್ರ ನಡೆಯುತ್ತಿದೆ. ಹಗರಣದ ಕಿಂಗ್​ಪಿನ್​ಗಳ ರಕ್ಷಣೆಗೆ ನಿಂತವರು ಯಾರು? ಚಿಲುಮೆಗೆ ಯಾರ ಒಲುಮೆ? ಎಂದು ಕೆಪಿಸಿಸಿ ಟ್ವೀಟ್ ಮಾಡಿ ಕಿಡಿಕಾರಿದೆ.ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆಯ ಕೆಲಸಗಾರರನ್ನು ಬಂಧಿಸಿ ಕಣ್ಣೊರೆಸುತ್ತಾ ಕಿಂಗ್ ಪಿನ್‌ಗಳ ರಕ್ಷಣೆಗೆ ನೀತಿರುವವರು ಯಾರು? ಚಿಲುಮೆಗೆ ಯಾರ ಒಲುಮೆ? ಬರ್ತ್‌ಡೇ ಪಾರ್ಟಿಗೆ ಹೋಗಿದ್ದ ಕ್ಯಾಷ್‌ಲ್ಲೇ ಅಭಿವೃದ್ಧಿಯಾದ ಸಚಿವರೇ? ಜನಕ್ರೋಶದಿಂದ ಖಾಲಿ ಕುರ್ಚಿ ದರ್ಶನ ಪಡೆಯುತ್ತಿರುವ ಬಿಜೆಪಿ ಮತದಾರರನ್ನೇ ಖಾಲಿ ಮಾಡಿಸುವ ಹುನ್ನಾರ ನಡೆಸಿದೆ.

BIGG NEWS : ಮೇಲುಕೋಟೆ ಬೆಟ್ಟದಲ್ಲಿ ತಪ್ಪಿದ ದುರಂತ : ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳ ಮೇಲೆ ಬಿದ್ದ ಬೃಹತ್ ಮರ : ಗಂಭೀರ ಗಾಯ

 

ಚಿಲುಮೆ ಸಂಸ್ಥೆಗೆ 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನಂದೀಶ್ ರೆಡ್ಡಿ ಕಡೆಯಿಂದ ಹಣ ಸಂದಾಯವಾಗಿದೆ. ಹಾಗೂ ಸಂಸ್ಥೆಯ ಮುಖ್ಯಸ್ಥನೊಂದಿಗೆ ಅಶ್ವಥ್ ನಾರಾಯಣ ಅವರ ಸಂಪರ್ಕವಿದೆ. ಬಿಜೆಪಿಯ ನಾಯಕರೊಂದಿಗೆ ಚಿಲುಮೆ ಸಂಸ್ಥೆಗೆ ನೇರ ಸಂಪರ್ಕವಿರುವುದು ಜಗಜ್ಜಾಹೀರು. ಹೀಗಿರುವಾಗ ಅದೇ ಸಂಸ್ಥೆಯ “ಉಚಿತ ಸೇವೆ”ಗೆ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇಕೆ? ಎಂದು ಕೆಪಿಸಿಸಿ ಟ್ವೀಟ್ ಮೂಲಕ ಅಶ್ವಥ್ ನಾರಾಯಣ ವಿರುದ್ಧ ವಾಗ್ದಾಳಿ ನಡೆಸಿದೆ.

 

Share.
Exit mobile version