ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದಂತ ರಾಜ್ಯದ ಜನತೆಗೆ ಮಳೆಯಿಂದಾಗಿ ತಂಪೆರೆದಿತ್ತು. ಅಲ್ಲಲ್ಲಿ ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಕೂಡ ಮನೆ ಮಾಡಿತ್ತು. ಈಗ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಧಾರಾಕರ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು, ಉತ್ತರ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ನಾಳೆಯಿಂದ ಮೇ.14ರವರೆಗೆ ಮಳೆಯಾಗಲಿದೆ ಎಂದು ತಿಳಿಸಿದೆ.

ನಾಳೆ ಶಿವಮೊಗ್ಗ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಮಳೆಯಾದ್ರೇ, ಮೇ.12ರಂದು ಬೆಳಗಾವಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದಿದೆ.

ಮೇ.13ರಂದು ಬೆಳಗಾವಿ, ಬೀದರ್, ಕಲಬುರ್ಗಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಮೇ.14ರಂದು ವಿಜಯಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗೋ ಸಾಧ್ಯತೆ ಇರೋ ಕಾರಣ, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಕೇಸ್ : ವಾಟರ್ ಫಿಲ್ಟರ್ ರಿಪೇರಿಗೆ ಬಂದು ಮಹಿಳೆಯನ್ನು ತಬ್ಬಿ ದೌರ್ಜನ್ಯ

ಮುಸ್ಲಿಮರಿಗೆ ಉದ್ಯೋಗ ಮೀಸಲಾತಿ ನೀಡಲು ಕಾಂಗ್ರೆಸ್ ಪಿತೂರಿ: ಮೋದಿ

Share.
Exit mobile version