ಬೆಂಗಳೂರು: ಮಳೆಯ ( Rain ) ಪ್ರಮಾಣ ಕಡಿಮೆಯಾಗಿ ರಾಜ್ಯದಲ್ಲಿ ಬೇಸಿಗೆ ಆರಂಭಗೊಂಡಿತ್ತು. ಈ ನಡುವೆಯೂ ಮುಂದಿನ ನಾಲ್ಕು ದಿನ ಜೋರು ಮಳೆ ( Heavy Rain ) ರಾಜ್ಯಾಧ್ಯಂತ ಆಗಲಿದೆ ಎಂಬುದಾಗಿ ಹವಾಮಾನ ಇಲಾಖೆ ( Meteorological Department ) ಮುನ್ಸೂಚನೆ ನೀಡಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಗಾಳಿಯ ಪರಿಣಾಮ ದಕ್ಷಿಣ ಕರ್ನಾಟಕ, ಕಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 4 ದಿನ ಜೋರಾಗಿ ಮಳೆ ಸುರಿಯಲಿದೆ ಎಂದಿದೆ.
ಇನ್ನೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಭಾನುವಾರವೂ ದಕ್ಷಿಣ ಕನ್ನಡದ ಬೆಳ್ತಂಗಡಿ, ಉಡುಪಿಯ ಕಾರ್ಕಳ, ಹಾಸನದ ಶ್ರವಣ ಬೆಳಗೋಳ ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
BIGG NEWS: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ