ಬೆಂಗಳೂರು: ಈಗಾಗಲೇ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ರಾಜ್ಯದ ವಿವಿಧ ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮುಂದಿನ ಐದು ದಿನ ರಾಜ್ಯದ ಹಲವಡೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ.

BREAKING NEWS: ಕೊಡಗು ಜಿಲ್ಲೆಯ ಭಾರೀ ಮಳೆ ಹಿನ್ನಲೆ: ನಾಳೆಯೂ ಅಂಗನವಾಡಿ ಸಹಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಕರಾವಳಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ. ನಾಳೆ ಕೂಡ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಆನಂತ್ರದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಶಿವಮೊಗ್ಗ: ಜಿಲ್ಲೆಯ ಹುಣಸೆಕಟ್ಟೆ ಗ್ರಾಮದಲ್ಲಿ ಜು.16ರಂದು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಇನ್ನೂ ಉತ್ತರ ಒಳನಾಡಿನ ಜಿಲ್ಲೆಯಾದಂತ ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿದನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

BREAKING NEWS: ಭಾರೀ ಮಳೆ ಹಿನ್ನಲೆ: ಜು.9ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮತ್ತೊಂದೆಡೆ ಚಿಕ್ಕಮಗಳೂರು, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ನಾಳೆ ಕೂಡ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

Share.
Exit mobile version