ಬೆಂಗಳೂರು: ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಿನ್ನೆ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಅತಿ ಹೆಚ್ಚು ಮಳೆ ಪುತ್ತೂರು ಹಾಗೂ ರಾಯಚೂರಲ್ಲಿ ತಲಾ 10 ಸೆಂ.ಮೀ ಆಗಿದೆ ಎಂಬುದಾಗಿ ತಿಳಿಸಿದೆ.
ನಾಳೆ ಭಾರಿ ಮಳೆಯೊಂದಿಗೆ ಗಾಳಿ ಬೀಸಲಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗಲಿದೆ. ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ ಸೇರಿದಂತೆ ಯಾದಗಿರಿ, ಬೆಳಗಾವಿ, ಕಲಬುರ್ಗಿ ಜಿಲ್ಲೆಯಲ್ಲಿ ಗಾಳಿ ಸಹಿಯ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕೋಲಾರ, ವಿಜಯಪುರ, ಬೆಂಗಳೂರು ನಗರ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಗದಗ, ಧಾರವಾಡ, ತುಮಕೂರು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
BREAKING: ಕೆ.ಆರ್ ನಗರ ‘ಸಂತ್ರಸ್ತೆ ಕಿಡ್ನ್ಯಾಪ್’ ಕೇಸ್: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಂಗಳೂರಲ್ಲಿ ಉಪ ವಿಭಾಗಗಳ ಹಂತದಲ್ಲಿ ‘ವಿಪತ್ತು ನಿರ್ವಹಣಾ ತಂಡಗಳ’ ನಿಯೋಜನೆ: ತುಷಾರ್ ಗಿರಿ ನಾಥ್