ಬೆಂಗಳೂರು: ಈಗಾಗಲೇ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶದ ಗ್ರಾಮಗಳು ಜಲಾವೃತಗೊಂಡು ರಸ್ತೆ ಸಂಪರ್ಕವೇ ಕಡಿತವಾಗಿದೆ. ಈ ನಡುವೆ ಮತ್ತೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ( Weather department forecast ) ನೀಡಿದೆ.

ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ರಾಜ್ಯ ಹವಾಮಾನ ಇಲಾಖೆಯು ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾಧ್ಯಂತ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.

BIG NEWS: ಇಂದಿನಿಂದಲೇ ಮಳೆಗಾಲ ಮುಗಿಯುವವರೆಗೆ ಕೊಡಗು ಜಿಲ್ಲೆಗೆ ಈ ವಾಹನಗಳ ಪ್ರವೇಶಕ್ಕೆ ನಿಷೇಧ – ಜಿಲ್ಲಾಡಳಿತ ಆದೇಶ

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಪರಿಣಾಮ ರೆಡ್ ಅಲರ್ಟ್ ( Red Alert ) ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಆರೆಂಜ್ ಅಲರ್ಟ್ ( Orange Alert ) ನೀಡಿದೆ.

ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನ ಯೆಲ್ಲೋ ಅಲರ್ಟ್ ( Yellow Alert ) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಇನ್ನೂ ಐದು ದಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಸಂಜೆಯ ವೇಳೆಗೆ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Karnataka Congress: ಉಗ್ರವಾದದ ‘ಮಹಾ ಪೋಷಕ’ ಬಿಜೆಪಿ – ಕಾಂಗ್ರೆಸ್ ಕಿಡಿ

ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದೆ.

Viral News: ವೇದಿಕೆಯಲ್ಲಿ ಸರ್ಕಸ್ ಮಾಡ್ತಿದ್ದ ವ್ಯಕ್ತಿಯ ಮೇಲೆ ‘ ಕರಡಿ ಅಟ್ಯಾಕ್‌ ‘ : ತೋಳುಗಳಿಗೆ ಕಚ್ಚಿದ ‘ ಆಘಾತಕಾರಿ ವಿಡಿಯೋ ‘ ವೈರಲ್

Share.
Exit mobile version