ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಇಂದಿನಿಂದ ಜೂನ್ 11ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಹೌದು ಕರ್ನಾಟಕ ರಾಜ್ಯದಲ್ಲಿ ಇಂದು ವ್ಯಾಪಕ ಮಳೆಯಾಗಿದೆ ಉತ್ತರ ಕನ್ನಡ ಜಿಲ್ಲೆ 23 cm, ಕಾರವಾರ 22 cm, ಗೋಕರ್ಣ 20cm, ಕುಮಟಾ 20 cm, ನಷ್ಟು ಮಳೆಯಾಗಿದೆ ಉತ್ತರ ಕರ್ನಾಟಕದಲ್ಲಿ 3.1-7.6 ಕಿಲೋಮೀಟರ್ ಎತ್ತರದಲ್ಲಿ ಸುಳಿ ಗಾಳಿ ಬೀಸಲಿದೆ. ಹೀಗಾಗಿ ಜೂನ್ 11 ರವರೆಗೆ ಗುಡುಗು ಮಿಂಚು ಗಾಳಿ ಸಹಿತ ಮಳೆ ಆಗಲಿದೆ.
ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರಿ ಆಗುವ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಯಪುರ, ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲೂ ಕೂಡ ಮಳೆ ಆಗಲಿದೆ.ಹಾಗಾಗಿ ಇಂದಿನಿಂದ ಜೂನ್ 11ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರತಿ ಗಂಟೆಗೆ 40 ರಿಂದ 50 km ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಜೂನ್ 11 ರವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಎಂದು ರಾಜ ಹವಾಮಾನ ಇಲಾಖೆಯ ತಜ್ಞ ಸಿ ಎಸ್ ಪಾಟೀಲ್ ಹೇಳಿಕೆ ನೀಡಿದರು.