ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ರೈತರ ಮುಖದಲ್ಲಿ ಸಂತಸ ತರಿಸಿದೆ ಏಕೆಂದರೆ ಕಳೆದ ಒಂದು ವರ್ಷದಿಂದ ಮಳೆ ಬಾರದೆ ರೈತರು ಕಂಗಾಲಾಗಿದ್ದರು ಇದೀಗ ವರುಣ ಕೃಪೆ ತೋರಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿದೆ.ಅಲ್ಲದೆ ಮುಂದಿನ ನಾಲ್ಕು ದಿನಗಳ ವರೆಗೆ ಪೂರ್ವ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇಂದು ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಂಗಳವಾರ ವರುಣಾರ್ಭಟ ಜೋರಾಗಿತ್ತು. ಉತ್ತರ ಕನ್ನಡದ ಸಿದ್ದಾಪುರದಲ್ಲಿ 52 ಮಿಮೀ, ಶೃಂಗೇರಿಯಲ್ಲಿ 50 ಮಿಮೀ ಮಳೆ ಸುರಿದಿದೆ.ಕೆಲವೆಡೆ ಸಾಧಾರಣ ಪ್ರಮಾಣದಲ್ಲಿ ಗುಡುಗು ಮಿಂಚು ಸಹಿತ ವರ್ಷಧಾರೆಯಾಗಿದೆ ತಿಳಿದುಬಂದಿದೆ.
ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ ಎರಡು ದಿನ ಹಾಗೂ ಶಿವಮೊಗ್ಗ, ಹಾಸನ, ಚಾಮರಾಜನಗರದಲ್ಲಿ ಮೇ 15ರಂದು, ದಣ ಕನ್ನಡ, ಉಡುಪಿಯಲ್ಲಿ ಮೇ 17ರಿಂದ ಮುಂದಿನ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯಿಂದ ಯೆಲ್ಲೋ ಅರ್ಲಟ್ ಘೋಷಿಸಿದೆ. ಉತ್ತರ ಕನ್ನಡದಲ್ಲಿ ಮೇ 18, ಮೇ 19ರಂದು ಯೆಲ್ಲೋ ಅರ್ಲಟ್ ಇರಲಿದೆ. ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.