ಉಡುಪಿ: ಕೇಂದ್ರ ಸರಕಾರವು ಕೇವಲ ಚುನಾವಣೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ ಮತ್ತು ಇದು ಬಿಜೆಪಿಯ ಚುನಾವಣಾ ಗಿಮಿಕ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.ಇದೇ ವೇಳೆ ಅವರು ಮಾತನಾಡಿ ರಾಜ್ಯದಲ್ಲಿ ಪೌರತ್ವ ಕಾಯ್ದೆಯ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಇಷ್ಟು ವರ್ಷಗಳ ಕಾಲ ಅದರ ಬಗ್ಗೆ ಮೌನವಾಗಿತ್ತು ಈಗ ಅದು ಚುನಾವಣೆ ಸಲುವಾಗಿ ಜಾರಿಗೆತರಲು ಮುಂದಾಗಿದೆ ಅಂಥ ಹೇಳಿದರು.
ಪಕ್ಷಕ್ಕೆ ಶಕ್ತಿ : ಜಯಪ್ರಕಾಶ್ ಹೆಗ್ಡೆ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಕರಾವಳಿಯಲ್ಲಿ ಪಕ್ಷಕ್ಕೆ ಬಲ ತುಂಬಿದೆ ಎಂದು ಸಿಎಂ ಹೇಳಿದರು.ಈ ಬಾರಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡದೆ ಯದುವೀರ್ ಅವರಿಗೆ ಟಿಕೆಟ್ ನೀಡುವ ಬಿಜೆಪಿ ನಿರ್ಧಾರದ ಹಿಂದಿನ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸಿಎಂ ಹೇಳಿದರು.