ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದಿದ್ದಾರೆ.
ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ. ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ 14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ.
ಅಹಮದಾಬಾದ್ ವಿಮಾನ ದುರಂತ: ಮೃತಪಟ್ಟವರಿಗೆ ಸಾಗರ ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ ಸಲ್ಲಿಕೆ
BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಗಾಯಗೊಂಡವರ ರಕ್ಷಣೆಗೆ ಮುಂದಾಗಿದ್ದ ವ್ಯಕ್ತಿ ಸೇರಿ ಮೂವರು ಸಾವು