ಬೆಂಗಳೂರು : ಪ್ರೇರಣಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳ ಶಾಲೆಗಳಲ್ಲಿ ಅನುಷ್ಠಾನ ಮಾಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ಪ್ರಯೋಗ ಶೈಕ್ಷಣಿಕ ಸಂಶೋಧನಾ ಸಂಸ್ಥೆ ಬೆಂಗಳೂರುರವರು ‘ಕ್ರಿಯಾ ವಿಜ್ಞಾನ’ ಕಾರ್ಯಕ್ರಮಕ್ಕೆ ಪೂರಕವಾಗಿ ‘ಪ್ರೇರಣಾ ಕಾರ್ಯಕ್ರಮವನ್ನು ಅನುಷ್ಠಾನಿಸಲು ಕ್ರಿಯಾ ವಿಜ್ಞಾನ ಶಾಲೆಗಳ ಸಮೀಪದ ಸುತ್ತಮುತ್ತಲಿನ ಶಾಲೆಗಳ ಮಕ್ಕಳಿಗೆ ಹಾಗೂ ವಿಜ್ಞಾನ ಶಿಕ್ಷಕರಿಗೆ, ಅನುಭವಗಳನ್ನು ಸದರಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೂಲಕ ನೀಡಲು ಅನುವಾಗುವಂತೆ, ವೇದಿಕೆಯನ್ನು ಒದಗಿಸಲು ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಸದರಿ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲಿ 7ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ವಿಜ್ಞಾನ ಶಿಕ್ಷಕರಿಗೆ ಯಾವುದೇ ರೀತಿ ತರಗತಿ ಪ್ರಕ್ರಿಯೆಗೆ ತೊಂದರೆಯಾಗದಂತೆ ಉಚಿತವಾಗಿ ಅನುಷ್ಠಾನಿಸಲು ಅನುಮತಿ ನೀಡಲಾಗಿದೆ.
ಈ ಸಂಬಂಧ ಉಪನಿರ್ದೇಶಕರು ಆಡಳಿತ ಮತ್ತು ಅಭಿವೃದ್ಧಿರವರು ಸದರಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಿಸಲು ಸಂಸ್ಥೆಯವರಿಗೆ ಪೂರ್ಣ ಸಹಕಾರ ನೀಡುವುದು ಹಾಗೂ ಡಯಟ್ ಹಂತದ NGO ನೋಡಲ್ ಅಧಿಕಾರಿಗಳು ಸದರಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನ ಸಂಬಂಧ ಫಲಶೃತಿಯ ವರದಿಯನ್ನು ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸದರಿ ಸಂಸ್ಥೆಯ ಶ್ರೀ ಸಂತೋಷ್ (ದೂರವಾಣಿ ಸಂಖ್ಯೆ: 7899471058) ರವರನ್ನು ಸಂಪರ್ಕಿಸುವುದು.