ಬೆಂಗಳೂರು : 2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 4 ರಿಂದ 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಏಕ್ ಸ್ಟೆಪ್ (EkStep) ಫೌಂಡೇಷನ್ ಸಂಸ್ಥೆಯ ಸಹಯೋಗದೊಂದಿಗೆ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಗಣಿತದ ಆರಂಭಿಕ ಸಾಮರ್ಥ್ಯಗಳಿಸಲು ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು “ಕಲಿಕಾ ದೀಪ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮಾಂಕ (1)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಭಾಷಣದ ಕಂಡಿಕೆ 111 (vi)ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ.
“ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಗಣಿತದ ಆರಂಭಿಕ ಸಾಮರ್ಥ್ಯಗಳಿಸಲು ಏಕ್ ಸ್ಟೆಪ್ (EkStep) ಫೌಂಡೇಷನ್ ಸಂಸ್ಥೆಯ ಸಹಯೋಗದೊಂದಿಗೆ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಕಲಿಕಾದೀಪ ಕಾರ್ಯಕ್ರಮವನ್ನು 2000 ಶಾಲೆಗಳಿಗೆ ವಿಸ್ತರಿಸುವುದು.”
ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಜುಲೈ 2024ರಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಏಕ್ ಸ್ಟೆಪ್ (EkStep) ಫೌಂಡೇಷನ್, ಬೆಂಗಳೂರು ರವರ ನಡುವೆ ರಾಜ್ಯಾದ್ಯಾಂತ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಅವಕಾಶಗಳನ್ನು ವೃದ್ಧಿಸಲು ಒಡಂಬಡಿಕೆ (MoU) ಮಾಡಿಕೊಳ್ಳಲಾಗಿರುತ್ತದೆ. “ಕಲಿಕಾ ದೀಪ” ಕಾರ್ಯಕ್ರಮದ ಉದ್ದೇಶವು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ತಂತ್ರಜ್ಞಾನವನ್ನು ಉಪಯೋಗಿಸಿ ಭಾಷೆ ಮತ್ತು ಗಣಿತ ವಿಷಯಗಳಲ್ಲಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಹೆಚ್ಚಿಸುವುದಾಗಿದೆ.
ಏಕ್ ಸ್ಟೆಪ್ (EkStep) ಫೌಂಡೇಷನ್ ಸಂಸ್ಥೆಯವರು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ತಂತ್ರಜ್ಞಾನವನ್ನು ಬಳಸಿ ಸಿದ್ದಪಡಿಸಿದ್ದ ತಂತ್ರಾಂಶದ ಸಹಾಯದೊಂದಿಗೆ ವಿದ್ಯಾರ್ಥಿಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಪ್ರಾಯೋಗಿಕವಾಗಿ ತುಮಕೂರು ಮತ್ತು ಕೊಪ್ಪಳ ಜಿಲ್ಲೆಗಳ ತಲಾ ಮೂರು ಶಾಲೆಗಳಲ್ಲಿ ಕಾರ್ಯಕ್ರಮವನ್ನು ಅನುಷ್ಠಾನಿಸಲಾಗಿರುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಓದುವ ತೊಡಕುಗಳು ಕಡಿಮೆ ಆಗುತ್ತಿದ್ದು, ಅವರ ಕಲಿಕಾ ಕೊರತೆಗಳು ನೀಗುತ್ತಿವೆ. ಈ ತಂತ್ರಜ್ಞಾನವು ವಿದ್ಯಾರ್ಥಿಗಳ ಭಾಷಾ ಪ್ರಾವೀಣ್ಯತೆಯನ್ನು ಉತ್ತಮಗೊಳಿಸಿ, ಅವರಲ್ಲಿ ಇತರ ವಿಷಯಗಳ ಕಲಿಕೆಗೂ ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3)ರಲ್ಲಿನ ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ರವರ ಪ್ರಸ್ತಾವನೆಯಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಘೋಷಣೆಯ ಕಂಡಿಕೆ 111 (vi) ರಂತೆ 2025-26ನೇ ಸಾಲಿನಿಂದ ಕಾರ್ಯನಿರತ ಕಂಪ್ಯೂಟರ್ ಸೌಲಭ್ಯ ಹೊಂದಿರುವ ರಾಜ್ಯದ ಸುಮಾರು 1,145 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಮತ್ತು ಗಣಿತದ ಆರಂಭಿಕ ಸಾಮರ್ಥ್ಯಗಳಿಸಲು ಏಕ್ ಸ್ಟೆಪ್ (EkStep) ಫೌಂಡೇಷನ್ ಸಂಸ್ಥೆಯ ಸಹಯೋಗದೊಂದಿಗೆ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ “ಕಲಿಕಾ ದೀಪ” ಕಾರ್ಯಕ್ರಮವನ್ನು 4 ರಿಂದ 6ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 1,44,062 ವಿದ್ಯಾರ್ಥಿಗಳಿಗಾಗಿ ಅನುಷ್ಠಾನಗೊಳಿಸಲು ತಗಲುವ .138.10 ៩ ថ្ម 2025-26 ℃ Elementary Head (5.10.1) ಅಡಿಯಲ್ಲಿ TLM Component(Class III-V) ಅನುಮೋದನೆಯಾಗಿರುವ ಒಟ್ಟು ಮೊತ್ತ ರೂ.4481.706 ಲಕ್ಷಗಳಲ್ಲಿ ಭರಿಸಲು ಸರ್ಕಾರದ ಅನುಮೋದನೆ ಕೋರಿರುತ್ತಾರೆ.