ಬೆಂಗಳೂರು: ನಿಪುಣ ಕರ್ನಾಟಕ ಯೋಜನೆ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಈ ಯೋಜನೆಯ ಅಡಿಯಲ್ಲಿ ಆಧುನಿಕ ಎಐ ತಂತ್ರಜ್ಞಾನಗಳೊಂದಿಗೆ ಕೌಶಲ್ಯ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.
ಈ ಕುರಿತು ಮಾಹಿತಿ ನೀಡಿರುವಂತ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು, ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದಿದ್ದಾರೆ.
ಈ ಯೋಜನೆಯನ್ನು ₹100 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಈ ಯೋಜನೆಯನ್ನು ₹10 ಕೋಟಿ ವೆಚ್ಚದಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗುವುದು. ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಉದಯೋನ್ಮುಖ ತಂತ್ರಜ್ಞಾನಗಳ ಕ್ಷೇತ್ರದ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸಲು ಮತ್ತು ಕರ್ನಾಟಕದ ಯುವಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗವಕಾಶ ಕಲ್ಪಿಸುವ ಉದ್ದೇಶದಿಂದ ಕೌಶಲ ಮತ್ತು ಪುನರ್ ಕೌಶಲ ಹಾಗೂ ವೃತ್ತಿಪರ ತರಬೇತಿ ನೀಡಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಈ ಯೋಜನೆಯನ್ನು ₹100 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ ಸಾಲಿನಲ್ಲಿ ಈ ಯೋಜನೆಯನ್ನು ₹10 ಕೋಟಿ ವೆಚ್ಚದಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗುವುದು. ಈ ಯೋಜನೆಗೆ… pic.twitter.com/Xax3xiUyi7
— DIPR Karnataka (@KarnatakaVarthe) September 9, 2024
BIG NEWS: ‘ಸಿಎಂ ಬದಲಾವಣೆ ಹೇಳಿಕೆ’ಗಳಿಗೆ ಬ್ರೇಕ್ ಹಾಕಿ: ‘ಎಐಸಿಸಿ ಅಧ್ಯಕ್ಷ ಖರ್ಗೆ’ಗೆ ‘ಕಾಂಗ್ರೆಸ್ ಮುಖಂಡ’ರು ಪತ್ರ
BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಹತ್ವದ ‘ಮೂರು ಮಸೂದೆ’ಗಳಿಗೆ ಅಂಕಿತ