Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಸಚಿವ ಕೆ.ಜೆ.ಜಾರ್ಜ್
KARNATAKA

ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ: ಸಚಿವ ಕೆ.ಜೆ.ಜಾರ್ಜ್

By kannadanewsnow0912/09/2025 8:33 PM

ಚಿಕ್ಕಮಗಳೂರು : ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಗಳೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಇಲ್ಲಿನ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಆ ಭಾಗದ ಜನರಿಗೆ ಯಾವುದೇ ಆತಂಕ ಬೇಡ. ಪರಿಸರದ ಮೇಲೆ ದುಷ್ಪರಿಣಾಮ ಬೀರದಂತೆ ಯೋಜನೆ ಜಾರಿಗೊಳಿಸಲಾಗುವುದು. ಪರಿಸರದ ಮೇಲೆ ದೊಡ್ಡ ಮಟ್ಟದಲ್ಲಿ ಹಾನಿಯಾಗುವುದಿಲ್ಲ. ಈ ವಿಚಾರವನ್ನು ಜನರಿಗೆ ತಿಳಿಸಿ ಅವರ ಮನವೊಲಿಸಲಾಗುವುದು ಎಂದರು.

2000 ಮೆಗಾವ್ಯಾಟ್ ಸಾಮರ್ಥ್ಯ ಈ ಯೋಜನೆ ಅನುಷ್ಠಾನಕ್ಕೆ ಕೇವಲ ಕೇವಲ 120 ಎಕರೆ ಜಮೀನು ಸಾಕು.ಇದರಲ್ಲಿ 50 ಎಕರೆ ಖಾಸಗಿಯಾಗಿದ್ದು, ಉಳಿದಂತೆ ಕಂದಾಯ ಮತ್ತು ಅರಣ್ಯ ಮತ್ತು ಕಂದಾಯ ಭೂಮಿಯನ್ನು ಬಳಸಿಕೊಳ್ಳಲಾಗುತ್ತದೆ. ಖಾಸಗಿಯವರ ಭೂಮಿಗೆ ಸೂಕ್ತ ಪರಿಹಾರ ನೀಡಲಾಗುವುದು. ಯೋಜನೆಗೆ ಬಳಸಿಕೊಳ್ಳುವ ಅರಣ್ಯಕ್ಕೆ ಬದಲಾಗಿ ಅರಣ್ಯ ಇಲಾಖೆಗೆ ಅರಣ್ಯೀಕರಣಕ್ಕೆ ಬೇಕೆ ಕಡೆಭೂಮಿ ನೀಡಲಾಗುವುದು ಎಂದು ತಿಳಿಸಿದರು.

ಪಂಪ್ಡ್ ಸ್ಟೋರೇಜ್ ಯೋಜನೆಗೆ ಹೊಸ ಜಲಾಶಯಗಳನ್ನು ನಿರ್ಮಿಸುವುದರಿಂದ ನದಿ ಹರಿವಿಗೂ ಅಡ್ಡಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್ ಲೈನ್ ಮೂಲಕ ನೀರನ್ನು ಮೇಲಿನ ಹಂತದಲ್ಲಿರುವ ತಲಕಳಲೆ ಜಲಾಶಯಕ್ಕೆ ಪಂಪ್ ಮಾಡಲಾಗುತ್ತದೆ. ಈ ಪೈಲ್ ಲೈನ್ ಗಳು ನೆಲದ ಒಳಗೆ ಇರುತ್ತದೆ. ಬಹುತೇಕ ನಿರ್ಮಾಣಗಳು ಸುರಂದ ಒಳಗೇ ಇರುವುದರಿಂದ ಯೋಜನೆಯಿಂದ ದೊಡ್ಡಮಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವುದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಯೋಜನೆ ಅನುಷ್ಠಾನವಾದಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು ಮತ್ತು ಅಗತ್ಯ ಸಂದರ್ಭದಲ್ಲಿ ಗ್ರಾಹಕರಿಗೆ ಪೂರೈಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ರೈತರಿಗೆ ಸೌರ ವಿದ್ಯುತ್:

ರೈತರ ನೀರಾವರಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಕುಸುಮ್ ಬಿ ಯೋಜನೆ ಅನುಷ್ಠಾಗೊಳಿಸಲಾಗಿದೆ. ವಿದ್ಯುತ್ ಫೀಡರ್ ನಿಂದ 500 ಮೀಟರ್ ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್ ಬಿ ಯೋಜನೆಯಡಿ ಸೌರವಿದ್ಯುತ್ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶೇ. 80ರಷ್ಟು ಸಬ್ಸಿಡಿ ನೀಡಲಾಗುವುದು. ಇನ್ನುಳಿದ ಶೇ. 20 ರಷ್ಟು ಹಣವನ್ನು ಮಾತ್ರ ಫಲಾನುಭವಿ ಭರಿಸಬೇಕು ಎಂದು ಹೇಳಿದರು.

ಅದೇ ರೀತಿ ಕುಸುಮ್ ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ತಯಾರಿಸಲು ಕ್ರಮಕೈಗೊಳ್ಳಲಾಗಿದೆ. ಇದಕ್ಕಾಗಿ 10 ಸಾವಿರ ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅನುಷ್ಠಾನವಾದಲ್ಲಿ 2500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಯಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸಬ್ ಸ್ಟೇಷನ್ ಗಳಲ್ಲಿ ಅಥವಾ ಲೈನ್ ಗಳಲ್ಲಿ ಸಮಸ್ಯೆ ಇರುವೆಡೆ ಮಾತ್ರ ವಿದ್ಯುತ್ ವ್ಯತ್ಯಯವಾಗುತ್ತಿರಬಹುದು. ಹೀಗಾಗಿಯೇ ಪ್ರತಿ ವರ್ಷ ರಾಜ್ಯದಲ್ಲಿ 100 ಹೊಸ ಸಬ್ ಸ್ಟೇಷನ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಇದ್ದರು.

BREAKING: ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ ನಿಗದಿಗೊಳಿಸಿ ಸರ್ಕಾರ ಅಧಿಕೃತ ಆದೇಶ

ಚಿತ್ರದುರ್ಗದಲ್ಲಿ ಡಿಜೆಗೆ ಅನುಮತಿ, ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ BJP ಎನ್.ರವಿಕುಮಾರ್ ಒತ್ತಾಯ

Share. Facebook Twitter LinkedIn WhatsApp Email

Related Posts

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM1 Min Read

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM1 Min Read

ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಮೂರನೇ ಬಾರಿಗೆ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!

11/04/2026 8:00 AM1 Min Read
Recent News

​ಟೋಲ್ ಪ್ಲಾಜಾಗಳಲ್ಲಿ ಇನ್ಮುಂದೆ ‘ಕ್ಯಾಶ್’ ನಡೆಯಲ್ಲ! ಸಂಪೂರ್ಣ ಕ್ಯಾಶ್‌ಲೆಸ್ ಆಗಲಿವೆ ರಾಷ್ಟ್ರೀಯ ಹೆದ್ದಾರಿಗಳು: ಸವಾರರೇ ಎಚ್ಚರ!

11/04/2026 8:29 AM

ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಬದಲಾವಣೆ: ಇನ್ಮುಂದೆ 26 ದಿನಗಳ ಗ್ಯಾಪ್ ಕಡ್ಡಾಯ! ಯಾವಾಗ ಬುಕ್ ಮಾಡಬೇಕು? ಇಲ್ಲಿದೆ ಮಾಹಿತಿ

11/04/2026 8:20 AM

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

11/04/2026 8:20 AM

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM
State News
KARNATAKA

SHOCKING : ಐಸ್ ಕ್ರೀಮ್ ತಿನ್ನೋ ಮೊದಲು ಎಚ್ಚರ : ಬೆಂಗಳೂರಲ್ಲಿ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್ ರಬ್ಬರ್ ಕಂಡು ಬೆಚ್ಚಿಬಿದ್ದ ಗ್ರಾಹಕ!

By kannadanewsnow0511/04/2026 8:20 AM KARNATAKA 1 Min Read

ಬೆಂಗಳೂರು : ಐಸ್ ಕ್ರೀಮ್ ತಿನ್ನುವ ಮೊದಲು ಇದೀಗ ಎಚ್ಚರದಿಂದ ಇರುವುದು ಒಳ್ಳೆಯದು. ಏಕೆಂದರೆ ಐಸ್ ಕ್ರೀಮ್ ನಲ್ಲಿ ಪ್ಲಾಸ್ಟಿಕ್…

BIG NEWS : RSS, ಬಿಜೆಪಿಯವರು ಕೆಲವು ಹುಚ್ಚುನಾಯಿಗಳನ್ನು ಸಾಕಿದ್ದಾರೆ : MLC ವಸಂತ್ ಕುಮಾರ್ ವಿವಾದಿತ ಹೇಳಿಕೆ!

11/04/2026 8:16 AM

ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಮೂರನೇ ಬಾರಿಗೆ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!

11/04/2026 8:00 AM

ಬೆಂಗಳೂರಿಗರೇ ಗಮನಿಸಿ : ಪೀಣ್ಯ ಫ್ಲೈಓವರ್‌ನಲ್ಲಿ ಲೋಡ್ ಟೆಸ್ಟಿಂಗ್, ಹಿನ್ನಲೆ, ಇಂದಿನಿಂದ 5 ದಿನ ವಾಹನ ಸಂಚಾರ ಬಂದ್!

11/04/2026 7:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.