ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ವ್ಯವಸ್ಥೆ( UPS) ಆಯ್ಕೆ ಮಾಡಿಕೊಳ್ಳಲು ಸೆಪ್ಟೆಂಬರ್.30 ಕೊನೆಯ ದಿನವಾಗಿದೆ. ಅದರ ಒಳಗಾಗಿ ಪೂರ್ಣಗೊಳಿಸುವಂತೆ ಕೇಂದ್ರ ಹಣಕಾಸು ಸಚಿವಾಲಯ ಸೂಚಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.1ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಯುಪಿಎಸ್ ಆಯ್ಕೆಗಾಗಿ ಅವಕಾಶ ನೀಡಲಾಗಿದೆ. ಜುಲೈ.20ರವರೆಗೆ ಸುಮಾರು 31,555 ನೌಕರರು ಯುಪಿಎಸ್ ಆಯ್ಕೆ ಮಾಡಿಕೊಂಡಿದ್ದಾರೆ ಎಂದಿದೆ.
ಕೇಂದ್ರ ಸರ್ಕಾರದ ಅರ್ಹ ನೌಕರರು ಕೊನೆಗಳಿಗೆಯಲ್ಲಿ ತರಾತುರಿಯಿಂದ ತಪ್ಪಿಸಿಕೊಳ್ಳದೇ ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(NPS) ಅನ್ನು ಆಯ್ಕೆ ಮಾಡಿದವರು ಸೆಪ್ಟೆಂಬರ್.30ರ ನಂತ್ರ ಮತ್ತೆ ಏಕೀಕೃತ ಪಿಂಚಣಿ ವ್ಯವಸ್ಥೆಗೆ ಬರಲಾಗದು ಎಂಬುದಾಗಿ ಖಡಕ್ ಆಗಿಯೇ ತಿಳಿಸಿದೆ.