ಮಡಿಕೇರಿ: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವ ಅರ್ಹ ಫಲಾನುಭವಿಗಳಿಗೆ ಜನವರಿ-2024 ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ಸಂಬಂಧ ಮೇ, 01 ರಿಂದ ಮೇ, 20 ಒಳಗೆ ಯುವನಿಧಿ ಸ್ವಯಂ ಘೋಷಣೆ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಅಭ್ಯರ್ಥಿಗಳು ಇದರ ಸೌಲಭ್ಯವನ್ನು ಪಡೆಯಲು ಮುಂದುವರಿಸಬೇಕಾದಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲ ಎಂದು ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿದೆ. ಸ್ವಯಂ ಘೋಷಣೆ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಅಥವಾ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡುವಂತೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.9449692691 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ಜೂನ್ ಅಂತ್ಯದೊಳಗೆ 3,614 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ: ಸಚಿವ ಕೃಷ್ಣ ಬೈರೇಗೌಡ
ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ