ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
2022-23ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ದಿ:30/09/2022, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳು ದಿ: 31/10/2022 ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳು ದಿ: 30/11/2022 ರೊಳಗಾಗಿ NSP ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆಲ್ಕೊಳ ಸರ್ಕಲ್, ಬಿ.ಎಸ್.ಎನ್.ಎಲ್ ಕಚೇರಿ ಪಕ್ಕ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 08182-295234/251676 ಗಳನ್ನು ಸಂಪರ್ಕಿಸುವುದು.