ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಗತ್ಯ ಸೇವೆಗಳ(AVES) ಸಿಬ್ಬಂದಿಗಳಿಗೆ ಮತ ಚಲಾಯಿಸಲು 3 ಲೋಕಸಭಾ ಕ್ಷೇತ್ರಗಳಲ್ಲೂ ಅಂಚೆ ಮತದಾನ ಕೇಂದ್ರ(Postal Voting Center) ವನ್ನು ಸ್ಥಾಪಿಸಲಾಗಿದೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1348 ಅಗತ್ಯ ಸೇವೆಗಳ ಸಿಬ್ಬಂದಿಯು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಗತ್ಯ ಸೇವೆ ಸಿಬ್ಬಂದಿಗಳಿಗೆ ದಿನಾಂಕ: 19-04-2024 ರಿಂದ 21-04-2024 ರವರೆಗೆ ಮೂರು ದಿನಗಳ ಕಾಲ ಬೆಳಗ್ಗೆ 9.00 ರಿಂದ ಸಂಜೆ 5.00 ಗಂಟೆಯರೆಗೆ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ಅಂಚೆ ಮತದಾನ ಕೇಂದ್ರ ಸ್ಥಾಪಿಸಿರುವ ಸ್ಥಳಗಳ ವಿವರ ಈ ಕೆಳಕಂಡಂತಿದೆ.

1. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಿವಿಸಿ:

ಚುನಾವಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ 17, ನೆಲ ಮಹಡಿ, ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿಗಳ ಕಛೇರಿ ಪಕ್ಕ, ಬಿಬಿಎಂಪಿ ಕೇಂದ್ರ ಕಛೇರಿ, ನರಸಿಂಹ ರಾಜ ವೃತ್ತ, ಬೆಂಗಳೂರು-560002.

2. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಪಿವಿಸಿ:

ಚುನಾವಣಾಧಿಕಾರಿಗಳ ಕಛೇರಿ, ವಲಯ ಆಯುಕ್ತರು(ದಕ್ಷಿಣ) ರವರ ಕಾರ್ಯಾಲಯ, 2ನೇ ಮಹಡಿ, ಮಹಾನಗರ ಪಾಲಿಕೆ ಕಛೇರಿಗಳ ಸಂಕೀರ್ಣ, 9ನೇ ಕ್ರಾಸ್, 2ನೇ ಬ್ಲಾಕ್, ಜಯನಗರ, ಬೆಂಗಳೂರು-560011.

3. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪಿವಿಸಿ:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ), ಕೇಂದ್ರ ಸಂಘ ಕಟ್ಟಡ, ಸಭಾಂಗಣ, ನೆಲಮಹಡಿ, ಕಂದಾಯ ಭವನ ಹಿಂಬಾಗ, ಕೆ.ಜಿ ರಸ್ತೆ ಬೆಂಗಳೂರು-560009.

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

Share.
Exit mobile version