ಧಾರವಾಡ : ಧಾರವಾಡ ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಲು ಕೃಷಿ ಇಲಾಖೆ ಧಾರವಾಡ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಕೃಷಿ ಪ್ರಶಸ್ತಿಯಡಿ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದ್ದು, ಕೃಷಿ ಇಲಾಖೆಯ ಕೆ-ಕಿಸಾನ ಫೋರ್ಟಲ್‍ನಲ್ಲಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದೆ. ಸಿಟಿಜನ್ ಲಾಗಿನ್ ಅಥವಾ ಆರ್‍ಎಸ್‍ಕೆ ಲಾಗಿನ್ ಮೂಲಕ ಹತ್ತಿರದ ರೈತಸಂಪರ್ಕಕೇಂದ್ರ ಅಥವಾ ಸೇವಾಕೇಂದ್ರ ಅಥವಾ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಪ್ರಶಸ್ತಿಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‍ಐಡಿ ಅನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತಿಯುಳ್ಳ ರೈತರು ಸೆಪ್ಟೆಂಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಬೆಳೆ ಕಟಾವು ಮಾಡುವ ವಿಧಾನ, ಸ್ಪರ್ಧಾತ್ಮಕ ಇಳುವರಿಯ ಮಾಹಿತಿ ಇತ್ಯಾದಿಗಳ ಬಗ್ಗೆ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳೆ: ಮುಂಗಾರು ಹಂಗಾಮಿಗೆ ರಾಜ್ಯ ಮಟ್ಟಕ್ಕೆ ಭತ್ತ (ನೀರಾವರಿ), ಭತ್ತ (ಮಳೆ ಆಶ್ರಿತ), ರಾಗಿ (ಮಳೆ ಆಶ್ರಿತ), ಶೇಂಗಾ (ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಸೋಯಾ ಅವರೆ (ಮಳೆ ಆಶ್ರಿತ), ಮುಸುಕಿನ ಜೋಳ (ಮಳೆ ಆಶ್ರಿತ), ನವಣೆ (ಮಳೆ ಆಶ್ರಿತ), ಸಜ್ಜೆ (ಮಳೆ ಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.
ಜಿಲ್ಲಾ ಮಟ್ಟದ ಪ್ರಶಸ್ತಿಗೆ ಬೆಳೆ: ಜಿಲ್ಲಾ ಮಟ್ಟದ ಸ್ಪರ್ಧೆಗೆ ಮುಸುಕಿನಜೋಳ (ಮಳೆ ಆಶ್ರಿತ) ಹಾಗೂ ತಾಲೂಕಾ ಮಟ್ಟದ ಸ್ಪರ್ಧೆಗೆ ಧಾರವಾಡ ಹಾಗೂ ಹುಬ್ಬಳ್ಳಿ ನಗರ ತಾಲೂಕಿಗೆ ಸೋಯಾಅವರೆ (ಮಳೆಆಶ್ರಿತ), ಹುಬ್ಬಳ್ಳಿ, ಕಲಘಟಗಿ, ಅಳ್ನಾವರ, ನವಲಗುಂದ ತಾಲೂಕಿಗೆ ಮುಸುಕಿನಜೋಳ (ಮಳೆಆಶ್ರಿತ) ಮತ್ತು ಅಣ್ಣಿಗೇರಿ, ಕುಂದಗೋಳ ತಾಲೂಕಿಗೆ ಶೇಂಗಾ (ಮಳೆಆಶ್ರಿತ) ಬೆಳೆ ನಿಗದಿಪಡಿಸಲಾಗಿದೆ.
2024-25 ನೇ ಸಾಲಿನಲ್ಲಿಯೂ ಸಹ ಕೃಷಿಯಲ್ಲಿ ರೈತ ಮಹಿಳೆಯರನ್ನು ಪೆÇ್ರೀತ್ಸಾಹಿಸುವ ಹಾಗೂ ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಕೃಷಿ ಪ್ರಶಸ್ತಿಯನ್ನು ನೀಡಲು ಸರ್ಕಾರವು ಅನುಮೋದನೆ ನೀಡಿದೆ. ಆದ್ದರಿಂದ ಮಹಿಳೆಯರು ಸಹ ಪ್ರತ್ಯೇಕವಾಗಿ ಮಹಿಳಾ ವಿಭಾಗಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಸಕ್ತ ರೈತರು, ರೈತ ಮಹಿಳೆಯರು ಸೆಪ್ಟೆಂಬರ 10, 2024 ರೊಳಗಾಗಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿಬಹ್ಮದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIG NEWS : 19 ವರ್ಷಗಳ ನಂತರ ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ, ಮಹಾಯುದ್ಧ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯ!