ಬೆಂಗಳೂರು: ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ. ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕಿದೆ.
BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್
2036ರ ಒಲಿಂಪಿಕ್ಸ್‌ಗೆ ಭಾರತ ಸಿದ್ಧತೆ: ಕೆಂಪುಕೋಟೆಯಿಂದ ಪ್ರಧಾನಿ ಮೋದಿ ಘೋಷಣೆ