ದಾವಣಗೆರೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಇದೇ ಜನವರಿ 30 ಮತ್ತು 31 ರಂದು ಎರಡು ದಿನಗಳ ಕಾಲ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನಡೆಯಲಿರುವ ಹಾಜರಾಗಬಹುದು. ಆಧಾರ್ ಕಾರ್ಡ್ ಜೆರಾಕ್ಸ್, ೨ ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂರವಾಣಿ 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
BREAKING NEWS : ಹಾಸನದಲ್ಲಿ ಸ್ವಪಕ್ಷೀಯ ಕಾರ್ಯಕರ್ತನಿಗೆ ಅಟ್ಟಾಡಿಸಿ ಹೊಡೆದ ಬಿಜೆಪಿ ನಾಯಕ
BIGG NEWS : ಜ.28 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut