ವರದಿ: ವಸಂತ ಬಿ ಈಶ್ವರಗೆರೆ ಜೊತೆಗೆ ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ( Karnataka Second PUC Annual Examination 2023 ) ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ( Karnataka School Examination and Evaluation Board ) ಪ್ರಕಟಿಸಿದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ( II PUC Annual Examination ) ದಿನಾಂಕ 09-03-2023 ರಿಂದ ದಿನಾಂಕ 29-03-2023ರವೆಗೆ ನಡೆಯಲಿದೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.
ಹೀಗಿದೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ
ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್
ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ
ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
ದಿನಾಂಕ 21-03-2023, ಮಂಗಳವಾರ – ಹಿಂದಿ
ದಿನಾಂಕ 23-03-2023, ಗುರುವಾರ – ಇಂಗ್ಲೀಷ್
ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಈ ನಡುವೆ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಪರಿಷ್ಕೃತ ನೀಲನಕ್ಷೆ ಹಾಗೂ ಕರಡು ಮಾದರಿ ಪ್ರಶ್ನೆಪತ್ರಿಕೆಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಇಲ್ಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಯಾ ವಿಶಯಗಳಿಗೆ ಸಂಬಂಧಪಟ್ಟಂತೆ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. https://sslc.karnataka.gov.in/new-page/March_2023_II_PUC_Annual_Examination_Draft_BP_&_MQP/kn