Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತಮ ಲೈಂಗಿಕ ಜೀವನಕ್ಕಾಗಿ ಈ 5 ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

ಲೈಂಗಿಕ ಆಸಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿವೆ 5 ನೈಸರ್ಗಿಕ ಮಾರ್ಗಗಳು!

‘ಪ್ರೆಶರ್ ಕುಕ್ಕರ್ ಸ್ಫೋಟ’ಗೊಳ್ಳಲು ಇವೇ ನೋಡಿ ಪ್ರಮುಖ ಕಾರಣಗಳು! ಸುರಕ್ಷತೆಗಾಗಿ ಈ ಕ್ರಮಗಳನ್ನು ಪಾಲಿಸಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻHSRPʼ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಮಹತ್ವದ ಮಾಹಿತಿ : ಜೂ.12 ರೊಳಗೆ ತಪ್ಪದೇ ಈ ಕೆಲಸ ಮಾಡಿ
KARNATAKA

ʻHSRPʼ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಮಹತ್ವದ ಮಾಹಿತಿ : ಜೂ.12 ರೊಳಗೆ ತಪ್ಪದೇ ಈ ಕೆಲಸ ಮಾಡಿ

By kannadanewsnow57

ಬೆಂಗಳೂರು: ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್‌ 12 ರವರೆಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ.

ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ.

ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಸಂಖ್ಯೆ: ಟಿಡಿ 193 ಟಿಡಿಒ 2021, ದಿನಾಂಕ : 17-08-2023 ಹಾಗೂ ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ರವರ ಸುತ್ತೋಲೆ ಸಂಖ್ಯೆ : ಸಾಆ/ನೋಂ-1/30-434/2022-23, ದಿನಾಂಕ : 18-08-2023 ಪ್ರಕಾರ, ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ.

ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ

• https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
• ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ.
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
• HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
• ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
• ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

ನಿಮಗೆ HSRP ನಂಬರ್ ಪ್ಲೇಟ್ ಅಳವಡಿಸೋ ಬಗ್ಗೆ ಪ್ರಮುಖ ಮಾಹಿತಿ

• https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ
ಕಾಯ್ದಿರಿಸಿಕೊಳ್ಳಿ.
• ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ | ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

• HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. · ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

Important information for motorists who do not have 'HSRP' number plate: Do this without fail till June 12 ʻHSRPʼ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಮಹತ್ವದ ಮಾಹಿತಿ : ಜೂ.12 ರವರೆಗೆ ತಪ್ಪದೇ ಈ ಕೆಲಸ ಮಾಡಿ
Share. Facebook Twitter LinkedIn WhatsApp Email

Related Posts

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

1 Min Read

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

1 Min Read

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

1 Min Read
Recent News

ಉತ್ತಮ ಲೈಂಗಿಕ ಜೀವನಕ್ಕಾಗಿ ಈ 5 ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

ಲೈಂಗಿಕ ಆಸಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿವೆ 5 ನೈಸರ್ಗಿಕ ಮಾರ್ಗಗಳು!

‘ಪ್ರೆಶರ್ ಕುಕ್ಕರ್ ಸ್ಫೋಟ’ಗೊಳ್ಳಲು ಇವೇ ನೋಡಿ ಪ್ರಮುಖ ಕಾರಣಗಳು! ಸುರಕ್ಷತೆಗಾಗಿ ಈ ಕ್ರಮಗಳನ್ನು ಪಾಲಿಸಿ

ಹಂಟಾವೈರಸ್ ಬಗ್ಗೆ ಆತಂಕ ಬೇಡ: ಇದು ‘ಕೋವಿಡ್’ ಮಾದರಿಯ ಸಾಂಕ್ರಾಮಿಕವಲ್ಲ; ಸ್ಪಷ್ಟನೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ | Hanta virus

State News
KARNATAKA

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

By kannadanewsnow09 KARNATAKA 1 Min Read

ಬೆಂಗಳೂರು: ತಮಿಳುನಾಡು ವಿಧಾನಸಭೆ ಚುನಾವಣೆಯ ನಂತರದ ಮಹತ್ವದ ಬೆಳವಣಿಗೆಯಲ್ಲಿ, ತಮಿಳಗ ವೆಟ್ರಿ ಕಳಗಂ (TVK) ಶಾಸಕಾಂಗ ಪಕ್ಷದ ನಾಯಕ ವಿಜಯ್…

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

BIG NEWS : ‘ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಅಮಿತ್‌ ಶಾ ಅದ್ದೂರಿ ಚಾಲನೆ : ಹರಿದುಬಂದ ಜನಸಾಗರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.