ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಸೀಟಿಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖಎಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದ 2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಹ 7328 ಮಕ್ಕಳನ್ನು ಎರಡನೇ ಸುತ್ತಿನ ಲಾಟರಿಗೆ ಪರಿಗಣಿಸಿದ್ದು ದಿನಾಂಕ:16.06.2025 ರಂದು ಆನ್ಲೈನ್ ಮೂಲಕ ಲಾಟರಿ ಪ್ರಕ್ರಿಯೆ ನಡೆಸಲಾಗಿದೆ ಎಂದಿದೆ.
ಈ ಎರಡನೇ ಸುತ್ತಿನ ಲಾಟರಿ, ಪುಕ್ರಿಯೆಯಲ್ಲಿ 921 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ಹಂಚಿಕೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಸೀಟು ಮಾಹಿತಿಯನ್ನು ನೀಡಲಾಗಿದೆ. ಸಂಬಂಧಿಸಿದ ಪೋಷಕರು ದಿನಾಂಕ:17.06.2025 ರಿಂದ 21.06.2025 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ಹಂಚಿಕೆ ವಿವರ ತಿಳಿಸಿದೆ. ಸೀಟು ದಾಖಲಾತಿ ಇಲಾಖಾ ವೆಬ್ಸೈಟ್ ಮಾಡಲು (www.schooleducation.karnataka.gov.in) ನಲ್ಲಿ ಲಭ್ಯವಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ನೀಡಿದ್ದಾರೆ.
ಮ್ಯಾಜಿಸ್ಟ್ರೇಟ್ ಅನುಮೋದನೆ ಇಲ್ಲದೆ ಪೊಲೀಸರು ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ: ಹೈಕೋರ್ಟ್
BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?