ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ(RTE) ಅಡಿ ಶಾಲಾ ದಾಖಲಾತಿಗೆ ಅರ್ಜಿ ಸಲ್ಲಿಸಿದ್ದಂತ ಪೋಷಕರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಿರುವುದಾಗಿ ತಿಳಿಸಿದೆ.
ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ- 2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಮೊದಲನೇ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪವೇಶಕ್ಕಾಗಿ ಅರ್ಹ 11096 ಸುತ್ತಿನ ಲಾಟರಿಗೆ ಪರಿಗಣಿಸಿದ್ದು ದಿನಾಂಕ:30.05.2025 ರಂದು ಆನ್ಲೈನ್ ಮೂಲಕ ಲಾಟರಿ ನಡೆಸಲಾಗಿದೆ ಎಂದಿದ್ದಾರೆ.
ಈ ಮೊದಲನೇ ಸುತ್ತಿನ ಲಾಟರಿ ಪುಕ್ರಿಯೆಯಲ್ಲಿ 3769 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧಿಸಿದ ಪೋಷಕರು ದಿನಾಂಕ:31.05.2025 ರಿಂದ 06.06.2025 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾತಿ ಮಾಡಲು ತಿಳಿಸಿದೆ. ಸೀಟು ಹಂಚಿಕೆ ವಿವರ ಇಲಾಖಾ ವೆಬ್ಸೈಟ್ www.schooleducation.karnataka.gov.in ನಲ್ಲಿ ಲಭ್ಯವಿದೆ ಎಂದು ಹೇಳಿದ್ದಾರೆ.
BREAKING : ಪೊಲೀಸರಿಂದ ಅಕ್ರಮವಾಗಿ ‘IPL’ ಟಿಕೆಟ್ ಮಾರಾಟ ದಂಧೆ ಪ್ರಕರಣ : ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್