ಬೆಂಗಳೂರು : 2023-24 ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳ ವಲಯ ವರ್ಗಾವಣೆಗೆ ಪರಿಷ್ಕೃತ ದಿನಾಂಕ ನಿಗಧಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮಗಳಲ್ಲಿನಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಉಲ್ಲೇಖಿತ ಪತ್ರದಲ್ಲಿ ವರ್ಗಾವಣಾ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಇದಕ್ಕೆ ಪೂರ್ವಭಾವಿಯಾಗಿ. ವಲಯ ವರ್ಗಾವಣೆಗೆ ಅರ್ಹರಿರುವ ಶಿಕ್ಷಕರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದರೆ ಇನ್ನೂ ಕೆಲವು ಶಿಕ್ಷಕರ ಮಾಹಿತಿ ತಂತ್ರಾಂಶದಲ್ಲಿ ಇಂದೀಕರಣವಾಗದ ಪ್ರಯುಕ್ತ ಕೆಲವು ಶಿಕ್ಷಕರ ಹೆಸರು ಬಿಟ್ಟು ಹೋಗಿರುತ್ತದೆ. ಕ್ರಮ ಕೈಗೊಳ್ಳುವ ಕುರಿತಂತೆ ದಿನಾಂಕ: 16/04/2024 ರಂದು ವಿಡಿಯೋ ಸಂವಾದದಲ್ಲಿ ರಾಜ್ಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೇಶಕರು(ಆಡಳಿತ) ಇವರೊಂದಿಗೆ ಚರ್ಚಿಸಿ ಈ ಕೆಳಗಿನಂತೆ ವಲಯ ವರ್ಗಾವಣೆಗೆ ಅನುವಾಗುವಂತೆ ವರ್ಗಾವಣಾ ವೇಳಾಪಟ್ಟಿಯಲ್ಲಿ ದಿನಾಂಕಗಳನ್ನು ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ, ಅದರಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.