ಬೆಂಗಳೂರು: 2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳೋದಕ್ಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಸಂಬಂಧ ದಿನಾಂಕ 15-04-2024ರಿಂದ 17-04-2024ರವರೆಗೆ ಪರೀಕ್ಷೆ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು ಎಂದಿದೆ.
ಆದ್ರೇ ಎಸ್ ಎಸ್ ಎಲ್ ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯುವುದರಿಂದ ಹಾಗೂ ಶಿಕ್ಷಕರು, ಅಧಿಕಾರಿಗಳನ್ನು ಲೋಕಸಭಾ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗುತ್ತಿರುವುದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ಲಿಖಿತ ಪರೀಕ್ಷಾ ದಿನಾಂಕಗಳನ್ನು ಮುಂದೂಡಿದೆ.
ಇದೀಗ ದಿನಾಂಕ 14-05-2024ರಿಂದ 16-05-2024ರವರೆಗೆ ನಡೆಸಲು ತೀರ್ಮಾನಿಸಿ, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
BREAKING: ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಶಾಕ್: ಕೊಲೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
BREAKING NEWS : 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ !