ಬೆಂಗಳೂರು: 2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ( Primary and High School Teacher ) ಸಹ -ಪಠ್ಯಚಟುವಟಿಕೆಗಳ ಸ್ಪರ್ಧೆಗಾಗಿ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ( co-curricular competition ) ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರೈಲ್ವೆ ಪ್ರಯಾಣಿಕರೇ ಗಮನಿಸಿ: ಪ್ರಯಾಣದ ವೇಳೇ ಈ ರೀತಿ ಮಾಡಿದ್ರೆ ದಂಡ ವಿಧಿಸಲಾಗುತ್ತದೆ
ಈ ಸಹ-ಪಠ್ಯ ಚಟುವಟಿಕೆಗಾಗಿ ಆಯೋಜನ ವೆಚ್ಚವನ್ನು ಕೂಡ ಬಿಡುಗಡೆ ಮಾಡಲಾಗಿದೆ. ಸ್ಪರ್ಧೆಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಈ ಕೆಳಗಿನ ವೇಳಾಪಟ್ಟಿಯಂತೆ ನಡೆಸಲು ನಿಗದಿ ಪಡಿಸಲಾಗಿದೆ. ವಿಜೇತರಾದ ಶಿಕ್ಷಕರಿಗೆ ಪ್ರತ್ಯೇಕ ಪ್ರಶಸ್ತಿ ಪತ್ರಗಳನ್ನು, ನಗದು ಬಹುಮಾನವನ್ನು ವಿತರಿಸಲಾಗುವುದು ಎಂದಿದ್ದಾರೆ.
ಹೀಗೆದೆ 2022-23ನೇ ಸಾಲಿನಲ್ಲಿ ನಡೆಯುವ ಸಹ-ಪಠ್ಯ ಚಟುವಟಿಕೆ ಸ್ಪರ್ಧೆಗಳ ವೇಳಾಪಟ್ಟಿ
- ದಿನಾಂಕ 15-11-2022ರಂದು ತಾಲೂಕು ಮಟ್ಟದ ಸ್ಪರ್ಧೆ, ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯೋಜಿಸಲಿದ್ದಾರೆ. ವಿಜೇತರ ಪಟ್ಟಿಯನ್ನು ದಿನಾಂಕ 22-11-2022ರೊಳಗೆ ಜಿಲ್ಲಾ ಉಪ ನಿರ್ದೇಶಕರಿಗೆ ಕಳುಹಿಸಲು ಸೂಚಿಸಲಾಗಿದೆ.
- ದಿನಾಂಕ 29-11-2022ರಂದು ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕರು ಆಯೋಜಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ವಿಜೇತರ ಪಟ್ಟಿಯನ್ನು ನಿಧಿಗಳ ಕಚೇರಿಗೆ ಕಳುಹಿಸಲು ಅಂತಿಮ ದಿನಾಂಕ 06-12-2022 ಆಗಿದೆ.
- ರಾಜ್ಯ ಮಟ್ಟದ ಸ್ಪರ್ಧೆಗಳ ದಿನಾಂಕವನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದ ಸ್ಪರ್ಧೆಯ ಬಳಿಕ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರ ಎಲ್ಲ ಸಹಕಾರ – ಸಿಎಂ ಬೊಮ್ಮಾಯಿ
ಅಂದಹಾಗೇ ಈ ಸಹ ಪಠ್ಯ ಚಟುವಟಿಕೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಯ ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರವೇ ಭಾಗವಹಿಸಲು ಅವಕಾಶವಿದೆ. ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹರಾಗಿರುತ್ತಾರೆ. ವಿಜೇತ ಶಿಕ್ಷಕರಿಗೆ ನಗದು ಬಹುಮಾನವಾಗಿ ಪ್ರಥಮ ರೂ.5000, ದ್ವಿತೀಯ ರೂ.3000 ಹಾಗೂ ತೃತೀಯ ಬಹುಮಾನ ರೂ.2000 ( ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಸೇರಿ 14 ಸ್ಪರ್ಧೆಗಳಿಗೆ ರೂ.10,000ದಂತೆ) ನೀಡಲಾಗುತ್ತದೆ.
ವರದಿ: ವಸಂತ ಬಿ ಈಶ್ವರಗೆರೆ