ಗಳೂರು: 2021-22ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉತ್ತಮ ಪ್ರಾಂಶುಪಾಲರು, ಉಪನ್ಯಾಸಕರ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಇಲಾಖೆಯು ಪ್ರಥಮ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿರುತ್ತದೆ. ಈ ವಿದ್ಯಾರ್ಥಿಗಳ ಭವಿಷ್ಯದ ಘಟ್ಟ ಬಹಣ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತವನ್ನು ಸದಾ ಬಯಸುವುದರೊಂದಿಗೆ, ಅವರ ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಗುರುತಿಸಿ, ಗೌರವಿಸುವ ಮೂಲಕ ಪ್ರೋತ್ಸಾಹಿಸುವ ಸರ್ಕಾರದ ಇಲಾಖೆಯ ಆಶಯವಾಗಿದೆ ಎಂದಿದ್ದಾರೆ.
Shocking: ರೆಸ್ಟೋರೆಂಟ್ನಲ್ಲಿ ಆರ್ಡರ್ ಮಾಡಿದ ಆಹಾರದಲ್ಲಿ ʻಹುಳುʼಗಳ ಹರಿದಾಟ: ಮಹಿಳೆ ಮಾಡಿದ್ದೇನು?
ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು 2021-22ನೇ ಶೈಕ್ಷಣಿಕ ಸಾಲಿಗೆ ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ಸರ್ಕಾರಿ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಉತ್ತಮ ಆಡಳಿತ ನಿರ್ವಹಿಸುತ್ತಿರುವ ಪ್ರಾಂಶುಪಾಲರಿಗೆ, ಉತ್ತಮವಾಗಿ ಬೋಧಿಸುತ್ತಿರುವ ಉಪನ್ಯಾಸಕರಿಗೆ ಉತ್ತಮ ಪ್ರಾಂಶುಪಾಲರು, ಉತ್ತಮ ಉಪನ್ಯಾಸಕರು ಪ್ರಶಸ್ತಿಯನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದೆ.
ಶಿಕ್ಷಕರ ದಿನಾಚರಣೆಯಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆದ್ದರಿಂದ ತಮ್ಮ ಜಿಲ್ಲೆಯಿಂದ ಸರ್ಕಾರಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಂತ ಪ್ರಾಂಶುಪಾಲರು, ಉಪನ್ಯಾಸಕರು ಆನ್ ಲೈನ್ ಮೂಲಕ ಇಲಾಖೆಗೆ ಅರ್ಜಿ ಸಲ್ಲಿಸುವಂತೆ ಹೇಳಿದೆ.
ಹಾಸ್ಟೆಲ್ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ
ಅಂದಹಾಗೇ ಅರ್ಜಿ ಸಲ್ಲಿಸುವಂತ ಉಪನ್ಯಾಸಕರು ದಿನಾಂಕ 31-03-2022ಕ್ಕೆ ಕನಿಷ್ಠ 10 ವರ್ಷಗಳ ಬೋಧನಾ ಅನುಭವ ಹೊಂದಿರಬೇಕು. ಪ್ರಾಂಶುಪಾಲರು ಕನಿಷ್ಠ 3 ವರ್ಷ ಉತ್ತಮ ಆಡಳಿತ ನಿರ್ವಹಿಸಿರುವ ಅನುಭವ ಹೊಂದಿರಬೇಕು.
ದಿನಾಂಕ 10-08-2022ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-08-2022 ಆಗಿರುತ್ತದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ದಿನಾಂಕ 23-08-2022ರೊಳಗೆ ಅಂತಿಮಗೊಳಿಸಬೇಕು. ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ 25-08-2022ರೊಳಗೆ ಆಯ್ಕೆ ಪಟ್ಟಿ ಸಿದ್ಧಪಡಿಸಬೇಕು. ದಿನಾಂಕ 26-08-2022ರೊಳಗೆ ಸರ್ಕಾರಕ್ಕೆ ಆಯ್ಕೆ ಪಟ್ಟಿಯನ್ನು ಸಲ್ಲಿಸಲು ಸೂಚಿಸಿದೆ. ದಿನಾಂಕ 03-09-2022 ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಲಾಗುತ್ತದೆ. ದಿನಾಂಕ 05-09-2022ರಂದು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದೆ.
ಕೇಂದ್ರ ಸಚಿವೆ ʻಸ್ಮೃತಿ ಇರಾನಿʼಯನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಗೋವಾ ಶಾಸಕ…?