Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ: ಈ ಹಂತ ಅನುಸರಿಸಿ, ಅಂತಿಮ ‘ಇ-ಖಾತಾ’ ಪಡೆಯಿರಿ | E-Khata
KARNATAKA

ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ: ಈ ಹಂತ ಅನುಸರಿಸಿ, ಅಂತಿಮ ‘ಇ-ಖಾತಾ’ ಪಡೆಯಿರಿ | E-Khata

By kannadanewsnow0919/10/2024 6:10 AM

ಬೆಂಗಳೂರು: ಬಿಬಿಎಂಪಿ ಸೇರಿದಂತೆ ರಾಜ್ಯಾಧ್ಯಂತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಅಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಅಂತಿಮ ಇ-ಖಾತಾವನ್ನು ಈ ಕೆಳಗಿನ ಹಂತಗಳನ್ನು ಅನುಸರಿಸಿ ಡೌನ್ ಮಾಡಿಕೊಳ್ಳಿ ಅಂತ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ‌ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳ ಒಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ನೀವು ತುರ್ತು ಆಸ್ತಿ ನೋಂದಣಿಯನ್ನು ಹೊಂದಿದ್ದೀರಾ ? ಹಾಗಿದ್ರೆ ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯಲು ದಯವಿಟ್ಟು ಕೆಳಗಿನ ವಿಧಾನವನ್ನು ಅನುಸರಿಸಿ.

1. ಆನ್‌ಲೈನ್‌ https://BBMPeAasthi.karnataka.gov.in ನಲ್ಲಿ ವಾರ್ಡ್‌ವಾರು ಇ-ಖಾತಾ ಪಟ್ಟಿಯಿಂದ ನಿಮ್ಮ ಕರಡು ಇ-ಖಾತಾ ಅನ್ನು ಡೌನ್‌ಲೋಡ್ ಮಾಡಿ.

2. ತಮ್ಮ ಸ್ವತ್ತಿನ ಆಸ್ತಿ ತೆರಿಗೆ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ತಿಳಿದುಕೊಳ್ಳಬಹುದು.

3. ಅಂತಿಮ ಇ-ಖಾತಾ ಪಡೆಯಲು ಕೆಳಗಿನ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನಮೂದಿಸಿ/ಅಪ್‌ಲೋಡ್ ಮಾಡಿ:

(i) ತಮ್ಮ ಸ್ವತ್ತಿನ ಆಸ್ತಿತೆರಿಗೆ ಅರ್ಜಿ ಸಂಖ್ಯೆಯ 10-ಅಂಕಿಗಳು.
(ii) ಮಾಲೀಕರ ಆಧಾರ್ ಆಧಾರಿತ eKYC (ಇ-ಖಾತಾ ನಲ್ಲಿರುವ ಎಲ್ಲಾ ಮಾಲೀಕರು eKYC ಮಾಡಬೇಕಾಗಿದೆ – ಯಾವುದೇ ಮಾಲೀಕರು ಆಧಾರ್ ಹೊಂದಿಲ್ಲದಿದ್ದರೆ, ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಬೇಟಿ ನೀಡಿ ಪಾಸ್‌ಪೋರ್ಟ್ ಅಥವಾ ವೋಟರ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅನ್ನು ಬಳಸಿ ದೃಢೀಕರಿಸಿ).
(iii) ಮಾಲೀಕರು ಆಸ್ತಿಯನ್ನು ಪಡೆದ ನೋಂದಾಯಿತ ಪತ್ರ ಸಂಖ್ಯೆ (ಕ್ರಯ/ದಾನ ಪತ್ರ ಇತ್ಯಾದಿ) (ಕಾವೇರಿ ತಂತ್ರಾಂಶದಿಂದ ನೋಂದಾಯಿತ ಪತ್ರ ಮಾಹಿತಿಯನ್ನು ಪಡೆಯಲಾಗುವುದು)
(iv) ಆಸ್ತಿಯ ಹಕ್ಕು ನಿರೂಪಿಸುವ ನೋಂದಾಯಿತ ಪತ್ರವು, ನೋಂದಣಿ ದಿನಾಂಕದ ಒಂದು ದಿನದ ಹಿಂದಿನಿಂದ ದಿ: 18.10.2024 ರವರೆಗೆ ಆಸ್ತಿಯ ಋಣಭಾರ ಪ್ರಮಾಣಪತ್ರ.
(v) ಆಸ್ತಿಯ ಮಾಲೀಕರು, ಆಸ್ತಿಯ ಹೊರಗೆ ಹಾಗೂ ಮುಂದೆ ನಿಂತಿರುವ ಆಸ್ತಿಯ ಛಾಯಾಚಿತ್ರ.
(vi) BESCOM 10-ಅಂಕಿಯ Acc ID (BESCOM ಬಿಲ್ ನೋಡಿ & ಖಾಲಿ ಭೂಮಿಗೆ ಕಡ್ಡಾಯವಲ್ಲ).
(vii) BWSSB (ಐಚ್ಛಿಕ).

4. ಮೇಲೆ ತಿಳಿಸಿರುವಂತೆ ಮಾಹಿತಿ ಹಾಗೂ ದಾಖಲೆಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿ, ಸಲ್ಲಿಸಿದ ನಂತರ, ಎಲ್ಲವೂ ಕ್ರಮದಲ್ಲಿದ್ದರೆ, ಒಂದೇ-ದಿನದಲ್ಲಿ ಅಂತಿಮ ಇ-ಖಾತಾ ವನ್ನು ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಅವರನ್ನು ಭೇಟಿ ಮಾಡತಕ್ಕದ್ದು.

5. ಮೇಲಿನ ವಿಧಾನವನ್ನು ಪೂರ್ಣಗೊಳಿಸಲು ಯಾವುದೇ ಸವಾಲುಗಳಿದ್ದಲ್ಲಿ ಮತ್ತು ನೀವು ತುರ್ತು ನೋಂದಣಿಯನ್ನು ಹೊಂದಿದ್ದರೆ, ನೀವು ತಮ್ಮ ಎಲ್ಲಾ ದಾಖಲೆಗಳು ಮತ್ತು ತಹಲ್‌ವರೆಗಿನ ಋಣಭಾರ ಪ್ರಮಾಣಪತ್ರವನ್ನು ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಅಲ್ಲಿ ಸಹಾಯ ಫಲಕದ ಸಿಬ್ಬಂಧಿಯು ತಮಗೆ ಮಾಹಿತಿಯನ್ನು ಅಪ್‌ಲೋಡ್ ಮಾಡಲು ಮತ್ತು ಒಂದು ದಿನದಲ್ಲಿ ನಿಯಮಗಳ ಪ್ರಕಾರ ನಿಮಗೆ ಅಂತಿಮ ಇ-ಖಾತಾಯನ್ನು ಹೊಂದಲು ಸಹಾಯವನ್ನು ಪಡೆಯಬಹುದು.

6. ಸೂಚನೆ: ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ತುರ್ತು ಆಸ್ತಿ ನೋಂದಣಿಯನ್ನು ಹೊಂದಿರದ ನಾಗರಿಕರು, ಬಿಬಿಎಂಪಿ ಹಿಂಬರಹದ ಮೂಲಕ ನಿರ್ದಿಷ್ಟವಾಗಿ ಸೂಚಿನೆಯ ಹೊರತು ಅಂತಿಮ ಇ-ಖಾತಾವನ್ನು ಪಡೆಯಲು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗದಂತೆ ವಿನಂತಿಸಲಾಗಿದೆ. ಅಂತಹ ಪ್ರಕರಣಗಳಲ್ಲಿ ತಮ್ಮ ಅಗತ್ಯಕ್ಕೆ ಅನುಕೂಲದ ಸಮಯದಲ್ಲಿ ತಮ್ಮ ಅಂತಿಮ ಇ-ಖಾತಾವನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಬಹುದು ಎಂಬುದನ್ನು ದಯವಿಟ್ಟು ಗಮನಿಸಿ. ಅಂತಹ ಸಂದರ್ಭಗಳಲ್ಲಿ ಋಣಭಾರ ಪ್ರಮಾಣಪತ್ರ (EC) ಅಗತ್ಯವನ್ನು ಕೈಬಿಡಲಾಗಿದೆ.

7. ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗಾಗಿ 1533 ಗೆ ಕರೆ ಮಾಡಿ ಅಥವಾ BBMPeKhata@gmail.com ಗೆ ಇಮೇಲ್ ಮಾಡಿ.

Share. Facebook Twitter LinkedIn WhatsApp Email

Related Posts

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM1 Min Read

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM1 Min Read

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM1 Min Read
Recent News

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM
State News
KARNATAKA

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0928/06/2025 9:49 PM KARNATAKA 1 Min Read

ಬೆಂಗಳೂರು: 2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1,…

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.