Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ | South Western Railway
KARNATAKA

‘ರೈಲ್ವೆ ಪ್ರಯಾಣಿಕ’ರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ | South Western Railway

By kannadanewsnow0918/07/2024 6:54 PM

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಲ ರೈಲುಗಳ ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸಂಚಾರವನ್ನು ನಿಯಂತ್ರಣ ಮಾಡಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ತಿಳಿಸಿದ್ದು, ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857 ರಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:

ರೈಲುಗಳ ಸಂಚಾರ ರದ್ದು

ಜುಲೈ 30, ಆಗಸ್ಟ್ 6 ಮತ್ತು 13 ರಂದು ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಲಿದೆ.

ಭಾಗಶಃ ರದ್ದು

ಜುಲೈ 30, ಆಗಸ್ಟ್ 6 ಮತ್ತು 13 ರಂದು ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ವೈಟ್ ಫೀಲ್ಡ್-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ನಾಂದೇಡ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16594 ನಾಂದೇಡ್-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಲಹಂಕ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.

ಜುಲೈ 31, ಆಗಸ್ಟ್ 7 ಮತ್ತು 14 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರ ನಿಲ್ದಾಣಗಳ ನಡುವೆ & ಹೊಸಪೇಟೆಯಿಂದ ಹೊರಡುವ ರೈಲು ಸಂಖ್ಯೆ 06243 ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್  ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು-ಯಶವಂತಪುರನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ. ಈ ರೈಲುಗಳು ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಪ್ರಾರಂಭವಾಗಲಿವೆ.

ಮಾರ್ಗ ಬದಲಾವಣೆ

ಜುಲೈ 29, ಆಗಸ್ಟ್ 5 ಮತ್ತು 12 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11013 ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಗೌರಿಬಿದನೂರು, ಬೈಯಪ್ಪನಹಳ್ಳಿ, ಎಸ್ಎಂವಿಟಿ ಬೆಂಗಳೂರು, ಬೈಯಪ್ಪನಹಳ್ಳಿ, ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಮೆಂಟ್, ಕೆಎಸ್ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ಬೆಂಗಳೂರಿನ ಎಸ್ಎಂವಿಟಿಯಲ್ಲಿ ಹೆಚ್ಚುವರಿ ನಿಲುಗಡೆ ಇರಲಿದೆ.

ಜುಲೈ 30, ಆಗಸ್ಟ್ 6 ಮತ್ತು 13 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಎಸ್ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕ್ಯಾಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ. ರೈಲು ಸಂಖ್ಯೆ 06269 ಮೈಸೂರು-ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್ಎಂವಿಟಿ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ 00:45 ಗಂಟೆಗೆ ಪ್ರಾರಂಭಿಸಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16521 ಬಂಗಾರಪೇಟೆ-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

ರೈಲು ಸಂಖ್ಯೆ 16021 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಕಾವೇರಿ ಡೈಲಿ ಎಕ್ಸ್ ಪ್ರೆಸ್ ರೈಲು ಕೃಷ್ಣರಾಜಪುರಂ, ಬೈಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮೂಲಕ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕ್ಯಾಂಟ್ ನಲ್ಲಿ  ನಿಗದಿತ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ

ಜುಲೈ 30, ಆಗಸ್ಟ್ 6 ಮತ್ತು 13, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 11301 ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಕೆಎಸ್ಆರ್ ಬೆಂಗಳೂರು ಉದ್ಯಾನ್ ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 5 ನಿಮಿಷ, ರೈಲು ಸಂಖ್ಯೆ 16231 ಮೈಲಾಡುತುರೈ-ಮೈಸೂರು ಎಕ್ಸ್ ಪ್ರೆಸ್ ರೈಲನ್ನು ಮಾರ್ಗದಲ್ಲಿ 45 ನಿಮಿಷ & ರೈಲು ಸಂಖ್ಯೆ 16220 ತಿರುಪತಿ-ಚಾಮರಾಜನಗರ ಎಕ್ಸ್ ಪ್ರೆಸ್ ರೈಲನ್ನು 100 ನಿಮಿಷ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ಜುಲೈ.20ರಂದು ನಿಗಮ-ಮಂಡಳಿ ನೇಮಕಾತಿಗೆ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಕರ್ನಾಟಕದ ‘ಕೊಬ್ಬರಿ ಬೆಳೆಗಾರ’ರಿಗೆ ‘ಕೇಂದ್ರ ಸರ್ಕಾರ’ದಿಂದ ಸಿಹಿಸುದ್ದಿ

Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM1 Min Read
Recent News

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.