ಬೆಂಗಳೂರು: ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇನ್ನೂ :2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಾರಿಗೆ/ರೈಲಿನ ವ್ಯವಸ್ಥೆಯನ್ನು ಕಲ್ಪಿಸುವ ಸಂಬAಧ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ ಲಿಂಕ್ https://swdservices.karnataka.gov.in ಮೂಲಕ ಅರ್ಜಿಯನ್ನು ಆ.31 ರೊಳಗೆ ಸಲ್ಲಿಸಬಹುದಾಗಿದೆ.