ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಎನ್ನುವಂತೆ, ಜನವರಿ.15, 2026ರವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಮಕ್ಕಳ ಆರಂಭಿಕ ಶಿಕ್ಷಣಕ್ಕೆ ಬೆಂಬಲವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 1ರಿಂದ 10ನೇ ತರಗತಿಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡುತ್ತಿದೆ ಎಂದಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2026 ಆಗಿರುತ್ತದೆ. ಅರ್ಜಿಯನ್ನು https://ssp.postmatric.karnataka.gov.in/ssppre/ ಲಿಂಕ್ ನಲ್ಲಿ ಆನ್ ಲೈನ್ ಮೂಲಕ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9482300400ಗೆ ಕರೆ ಮಾಡಿ ಎಂದಿದೆ.
ಮತ ಕಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ








