ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2ರ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಲಾಗಿದೆ. ಈಗ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಈ ಪರೀಕ್ಷೆಗೆ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದೆ.
ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024 ನೇ ಸಾಲಿನ ಹಿಂದಿನ ವರ್ಷದ ಪುನರಾವರ್ತಿತ ಅಭ್ಯರ್ಥಿಗಳು, 2024ರ ದ್ವಿತೀಯ ಪಿಯುಸಿ ಪರೀಕ್ಷೆ -1 ರಲ್ಲಿ ನೋಂದಾಯಿಸಿಕೊಂಡಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಸರ್ಕಾರದ ಆದೇಶ ಸಂಖ್ಯೆ ಇಪಿ.139.ಎಸ್.ಎಲ್.ಬಿ.2024 ದಿನಾಂಕ: 04-06-2024ರಲ್ಲಿ ಅವಕಾಶ ನೀಡಲಾಗಿರುತ್ತದೆ ಎಂದಿದ್ದಾರೆ.
ಅದರಂತೆ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ದಿನಾಂಕ: 07-06-2024 ರೊಳಗೆ ನೋಂದಾಯಿಸಿಕೊಳ್ಳಬಹುದಾಗಿರುತ್ತದೆ ಅಂತ ತಿಳಿಸಿದ್ದಾರೆ.
BREAKING: ಜೂ.19ರವರೆಗೆ ‘ಸಿಎಂ ಅರವಿಂದ್ ಕೇಜ್ರಿವಾಲ್’ಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ
Watch Video : ಒಂದೇ ವಿಮಾಣದಲ್ಲಿ ಒಟ್ಟಿಗೆ ಪ್ರಯಾಣಿಸಿದ ನಿತೀಶ್ ಕುಮಾರ್-ತೇಜಸ್ವಿ ಯಾದವ್! ವಿಡಿಯೋ ವೈರಲ್