ಬೆಂಗಳೂರು: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ.
ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ.
ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.
ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು
BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?