ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( Computer Literacy Test -CLT ) ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಒಂದು ವೇಳೆ ಪಾಸ್ ಆಗದೇ ಇದ್ದರೇ ನೌಕರರ ಪರಿವೀಕ್ಷಣಾ ಅವಧಿ, ಮುಂಬಡ್ತಿ, ವೇತನ ಬಡ್ತಿ ಇಲ್ಲವಾಗಿದೆ.
ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮಾಹಿತಿ ನೀಡಿದ್ದು, ಕರ್ನಾಟಕ ಸಿವಿಲ್ ಸೇವಾ ನಿಯಮದಂತೆ ನಿರ್ಧಿಷ್ಟ ಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ, ಇನ್ನಿತರೆ ಎಲ್ಲಾ ಸರ್ಕಾರಿ ನೌಕರರು ದಿನಾಂಕ 31-12-2022ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಹೇಳಿದ್ದಾರೆ.
ಹಾಸ್ಟೆಲ್ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ
ಇನ್ನೂ ಈ ದಿನಾಂಕದ ನಂತ್ರ ಪರೀಕ್ಷೆ ಉತ್ತೀರ್ಣರಾಗದ ನೌಕರರು ಪರಿವೀಕ್ಷಕಣಾ ಅವಧಿ, ಮುಂಬಡ್ತಿ ಹಾಗೂ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಸರ್ಕಾರವು ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಕೇಂದ್ರ ಸಚಿವೆ ʻಸ್ಮೃತಿ ಇರಾನಿʼಯನ್ನು ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಗೋವಾ ಶಾಸಕ…?
ಈ ಹಿನ್ನಲೆಯಲ್ಲಿ ಪರೀಕ್ಷೆ ಪಡೆಯದಂತ ಸರ್ಕಾರಿ ನೌಕರರು, ಅಧಿಕಾರಿಗಳು ಪ್ರತಿ ಶನಿವಾರ ಹಾಗೂ ಭಾನುವಾರ ನಡೆಯಲಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಂಡು, ದಿನಾಂಕ 31-12-2022ರೊಳಗೆ ಉತ್ತೀರ್ಣರಾಗುವಂತೆ ಕೋರಿದ್ದಾರೆ.