ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಬದಲು ಹಳೇ ಪಿಂಚಣಿ ಯೋಜನೆ ಜಾರಿ ಸಾಧ್ಯತೆಗಳ ಕುರಿತು ಪರಿಶೀಲಿಸಲು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಫರ್ವೇಜ್ ಅಧ್ಯಕ್ಷತೆಯಲ್ಲಿ ಐವರು ಐಎಎಸ್ ಅಧಿಕಾರಿಗಳ ಹೊಸ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ದಿನಾಂಕ 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲಾ ನೌಕರರಿಗೆ ಕಡ್ಡಾಯವಾಗಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸೂಕ್ತ ಬದಲಾವಣೆ/ಮಾರ್ಪಾಡು ಮಾಡಲು ಪರಿಶೀಲಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (3) ರಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ (Defined Pension Scheme) ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ
ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಲಾಗಿದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಮಗ್ರವಾಗಿ ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ಸೂಕ್ತ ವರದಿಯನ್ನು ಸಲ್ಲಿಸಲು ಅನುವಾಗುವಂತೆ ಸಮಿತಿಯನ್ನು
ಪುನರ್ ರಚಿಸುವುದು ಅಗತ್ಯವೆಂದು ಸರ್ಕಾರವು ಮನಗಂಡಿರುತ್ತದೆ. ಅದರಂತೆ ಈ ಕೆಳಕಂಡ ಆದೇಶದಲ್ಲಿ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/89/2023 ಬೆಂಗಳೂರು, ದಿನಾಂಕ:16.08.2024 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ: 11.12.2018ರ ಮತ್ತು ದಿನಾಂಕ: 01.03.2023 ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ಈ ಕೆಳಕಂಡಂತೆ ಪುನರ್ ರಚಿಸಿದೆ.
ಸಮಿತಿಯು ಈಗಾಗಲೇ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಮುಂದುವರೆದು, ಸಮಿತಿಯು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವಲ್ಲಿ ಸಕ್ಷಮವಾಗಿರುತ್ತದೆ. ಸಮಿತಿಯ ಪರಿಶೀಲನೆಗೊಳಪಟ್ಟ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ಒದಗಿಸಲು ಸರ್ಕಾರದ ಎಲ್ಲಾ ಇಲಾಖೆಗಳು ನಿಗಧಿತ ಕಾಲಮಿತಿಯೊಳಗೆ ಸೂಕ್ತ ನೆರವು ನೀಡುವಂತೆ ಸೂಚಿಸಿದೆ.