ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ ಎನ್ನುವಂತೆ ನೌಕರರು ತಮ್ಮ ಸಂಬಂಳದ ಖಾತೆಗಳನ್ನು ಹೆಚ್ ಆರ್ ಎಂ ಎಸ್ ನಲ್ಲಿ ಕಡ್ಡಾಯವಾಗಿ ನಮೂದಿಸುವಂತೆ ಸರ್ಕಾರ ಸೂಚಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನೌಕರರ ಮತ್ತು ಅವಲಂಬಿತ ಕುಟುಂಬ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳು ಒದಗಿಸುವ ಸಂಬಳ ಪ್ಯಾಕೇಜುಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೂ ಕಡ್ಡಾಯಗೊಳಿಸಲಾಗಿದೆ ಎಂದಿದೆ.
ವಿವಿಧ ಬ್ಯಾಂಕುಗಳು ಒದಗಿಸುವ ಸಂಬಂಳ ಪ್ಯಾಕೇಜುಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ಎಲ್ಲಾ ಅಧಿಕಾರಿ, ನೌಕರರಿಗೆ ಕಡ್ಡಾಯಗೊಳಿಸಲಾಗಿದೆ. ಬ್ಯಾಂಕುಗಳು, ಅಂಚೆ ಕಚೇರಿಗಳು ನೀಡುವ ಪಿಎಂ ಜೆ ಜೆ ಬಿ ವೈ ಮತ್ತು ಪಿಎಂಎಸ್ ಬಿವೈ ಯೋಜನೆಗಳ ಅಡಿಯಲ್ಲಿ ಸ್ವಯಂ ಪ್ರೇರಿತ ಆಧಾರದ ಮೇಲೆ ವಿಮಾ ರಕ್ಷಣೆಯನ್ನು ಪಡೆಯಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿ, ನೌಕರರಿಗೆ ಆದೇಶಿಸುವುದು ಅಂತ ತಿಳಿಸಿದೆ.
ಬ್ಯಾಂಕುಗಳು ನೀಡುವ ವಿವಿಧ ಯೋಜನೆಗಳ ಅಡಿಯಲ್ಲಿ ಸ್ವಯಂ ಪ್ರೇರಿತ ಆಧಾರದ ಮೇಲೆ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯನ್ನು ಪಡೆಯಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿ, ನೌಕರರಿಗೂ ತಿಳಿಸುವುದು. ಸರ್ಕಾರದ ಅಧಿಕಾರಿ, ನೌಕರರ ಪಿಎಂ ಜೆ ಜೆ ಬಿ ವೈ ಮತ್ತು ಪಿಎಂ ಎಸ್ ಬಿ ವೈ ಯೋಜನೆಗಳ ವಿವರಗಳನ್ನು ಹೆಚ್ ಆರ್ ಎಂ ಎಸ್ ನಲ್ಲಿ ನಮೂದಿಸಲು ಸೂಚಿಸಲಾಗಿದೆ.