ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾಗಿದ್ದಂತವರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳೋದಕ್ಕೂ ಮಾಹಿತಿ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಕೆ ಎಸ್ ಇ ಎ ಬಿ ತಂತ್ರಾಂಶದಲ್ಲಿ ಇಂದೀಕರಿಸಲು ದಂಡ ರಹಿತ ಕೊನೆಯ ದಿನಾಂಕ 23-05-2024ರಿಂದ 28-05-2024 ಆಗಿದೆ. ದಂಡ ಸಹಿತವಾಗಿ ದಿನಾಂಕ 29-05-2024ರಿಂದ 30-05-2024 ಕೊನೆಯ ದಿನವಾಗಿದೆ ಎಂದು ತಿಳಿಸಿದೆ.
ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕಾದ ಕೊನೆಯ ದಿನಾಂಕ 29-05-2024 ಆಗಿದೆ. ದಂಡ ಸಹಿತ ಶುಲ್ಕ ಪಾವತಿಗೆ ದಿನಾಂಕ 31-05-2024 ಕೊನೆ ದಿನವಾಗಿದ. ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ 30-05-2024. ದಂಡಸಹಿತ ಶುಲ್ಕದ ಕೊನೆಯ ದಿನಾಂಕ 01-06-2024 ಆಗಿದೆ ಎಂದು ತಿಳಿಸಿದೆ.
2023-24ನೇ ಸಾಲಿನ ಫಲಿತಾಂಶ ಪೂರ್ಣಗೊಂಡಿರದ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ವಿದ್ಯಾರ್ಥಿಗಳು ಮಂಡಳಿಯ https://kseab.karnataka.gov.in ಅಂತರ್ಜಾಲದಲ್ಲಿ ನೇರವಾಗಿ ಪರೀಕ್ಷೆ-3ಕ್ಕೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಹೇಳಿದೆ.
‘ಮೊದಲು ಇಂಡಿಯಾ ಮೈತ್ರಿ ಮುರಿದು ಬಿದ್ದಿತು, ನಂತ್ರ ಕುಸಿಯಿತು ಮತ್ತು ಈಗ ಸಂಪೂರ್ಣವಾಗಿ ಸೋತಿದೆ’ : ಪ್ರಧಾನಿ ಮೋದಿ
BREAKING : ವಿಜಯಪುರದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು