ಬೆಂಗಳೂರು : 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲು ದಿನಾಂಕ:19.06.2024 ರಿಂದ ಪ್ರಾರಂಭಿಸಿ ದಿನಾಂಕ:19.07.2024 ರವರೆಗೆ ಮುಕ್ತಾಯಗೊಳಿಸಲು ಕಾರ್ಯಕ್ರಮ ನಿರ್ದೇಶಕರು, ರಾಜ್ಯ ವಿದ್ಯಾರ್ಥಿವೇತನ ಹಾಗೂ ವಿದ್ಯಾರ್ಥಿನಿಲಯ ಪೋರ್ಟಲ್ ಕೇಂದ್ರ ಬೆಂಗಳೂರು ರವರಿಗೆ ಕೋರಿದೆ.
ಆದ್ದರಿಂದ. ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ರವರು 2024-25 ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ದಿನಾಂಕ:19.06.2024 ರಿಂದ ಪ್ರಾರಂಭಿಸಿ ದಿನಾಂಕ:19.07.2024 ರವರೆಗೆ ಅರ್ಜಿ ಆಹ್ವಾನಿಸಲು ಜಿಲ್ಲಾಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ನಿಯಮಾನುಸಾರ ಸೀಟುಗಳ ಭರ್ತಿ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದೆ. https://shp.karnataka.gov.in ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ಗೆ ಭೇಟಿ ನೀಡಬಹುದು.