ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2025-26 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 26.05.2025 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2025 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು.
2025-26ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವು ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ಕೆಂಪೇಗೌಡ ಬಸ್ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು.
ಮುಂದುವರೆದು, ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಾಲ್ಸೆಂಟರ್ ಸಂಖ್ಯೆ – 08022483777 ಗೆ ಸಂಪರ್ಕಿಸಬಹುದಾಗಿದೆ ಹಾಗೂ ಸಂಸ್ಥೆಯ ವೆಬ್ಸೈಟ್ ಮೂಲಕ ಪಡೆಯಬಹುದಾಗಿದೆ.
BREAKING: ನಾಳೆ ಮಧ್ಯಾಹ್ನ 2 ಗಂಟೆಗೆ UGCET-2025ರ ಫಲಿತಾಂಶ ಪ್ರಕಟ | KCET Exam Result 2025
ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!